CHITRADURGA NEWS | 25 JULY 2025
ಚಿತ್ರದುರ್ಗ: ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಆಯೋಜನೆ ಮಾಡುವ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯ 2025ನೇ ಸಾಲಿನ ಅಧ್ಯಕ್ಷರಾಗಿ ಹೋಟೆಲ್ ಉದ್ಯಮಿ ಶರಣ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಮೆದೇಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷರೂ ಆಗಿರುವ ಹೋಟೆಲ್ ಐಶ್ವರ್ಯಾ ಫೋರ್ಟ್ ಸಮೂಹದ ಶರಣ್ ಕುಮಾರ್ ಕಳೆದ ಹಲವು ವರ್ಷಗಳಿಂದ ಹಿಂದೂ ಮಹಾಗಣಪತಿ ಉತ್ಸವ ಸಮಿತಿಯಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದಾರೆ.
ಇದನ್ನೂ ಓದಿ: ಜುಲೈ 27 ರಿಂದ ವಿವಿ ಸಾಗರಕ್ಕೆ ಭದ್ರಾ ನೀರು | ವೇದಾವತಿ ಮೂಲಕ ಹರಿಯುವಳು ಭದ್ರೆ
ಈ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾಗಿ ಶರಣ್ ಅವರನ್ನೇ ಆಯ್ಕೆ ಮಾಡಲಾಗಿದೆ ಎಂದು ವಿಶ್ವಹಿಂದೂ ಪರಿಷತ್ ತಿಳಿಸಿದೆ.
ಹಿಂದೂ ಮಹಾಗಣತಿ ಉತ್ಸವಕ್ಕೆ 18 ವರ್ಷ:
ಚಿತ್ರದುರ್ಗದಲ್ಲಿ ಅದ್ದೂರಿಯಾಗಿ ಜರುಗುವ ಹಿಂದೂ ಮಹಾಗಣಪತಿ ಉತ್ಸವ ಈ ವರ್ಷ 18ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದೆ. ಕಳೆದ 17 ವರ್ಷಗಳಿಂದ ಯಶಸ್ವಿಯಾಗಿ ಜರುಗಿದ್ದು, ಕೊನೆಯ ದಿನ ನಡೆಯುವ ಶೋಭಾಯಾತ್ರೆಗೆ ಸೇರುವ ಲಕ್ಷಾಂತರ ಜನ ಪ್ರಮುಖ ಆಕರ್ಷಣೆಯಾಗಿದ್ದು, ಇದು ರಾಷ್ಟ್ರದ ಗಮನ ಸೆಳೆದಿದೆ.
ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಜನ ಸೇರುವ ಗಣೇಶೋತ್ಸವ ಎಂದು ಹೆಸರಾಗಿದೆ ಎಂದು ವಿಎಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದರು.
ಇದನ್ನೂ ಓದಿ: ಜಿಲ್ಲಾ ಪಂಚಾಯಿತಿ ನೂತನ CEO ಆಗಿ ಡಾ.ಆಕಾಶ್ ಅಧಿಕಾರ ಸ್ವೀಕಾರ
ಆಗಸ್ಟ್ 27 ರಂದು ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಯಾಗಲಿದ್ದು, 18 ದಿನಗಳ ನಂತರ ಅಂದರೆ ಸೆಪ್ಟಂಬರ್ 13 ರಂದು ಶೋಭಾಯಾತ್ರೆ ಮೂಲಕ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
