
CHITRADURGA NEWS | 21 SEPTEMBER 2024
ಚಿತ್ರದುರ್ಗ: ಮಂಗಳೂರು ಮೂಲದ ವಿಶ್ವಹಿಂದೂ ಪರಿಷತ್ (VHP) ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸೆ.22 ಅಂದರೆ ನಾಳೆ ಬೆಳಗ್ಗೆ ಹಿರಿಯೂರಿನಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಸಭೆಯಲ್ಲಿ ಶರಣ್ ಪಂಪ್‍ವೆಲ್ ದಿಕ್ಸೂಚಿ ಭಾಷಣ ನಿಗಧಿಯಾಗಿತ್ತು.

ಇದನ್ನೂ ಓದಿ: ಬಿಜೆಪಿ ಯುವ ಮೋರ್ಚಾದಿಂದ ಬಸವೇಶ್ವರ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
ಇದೇ ದಿನ ಸಂಜೆ ಚಿತ್ರದುರ್ಗದ ಹಿಂದೂ ಮಹಾಗಣಪತಿ ಬಳಿಯ ವೇದಿಕೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಬೇಕಾಗಿತ್ತು.
ಆದರೆ, ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಶರಣ್ ಪಂಪ್‍ವೆಲ್ ವಿರುದ್ಧ ಹಲವಾರು ಪ್ರಕರಣ ದಾಖಲಾಗಿವೆ. ಸೆ.28 ರಂದು ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆ ನಡೆಯಲಿದೆ. ಲಕ್ಷಾಂತರ ಜನ ಸೇರುವುದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸೆ.22 ರಿಂದ ಅಕ್ಟೋಬರ್ 7 ರವರೆಗೆ ಶರಣ್ ಪಂಪ್‍ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲೆಗೆ ಪ್ರವೇಶ ನಿರ್ಬಂದಿಸಿ ಆದೇಶಿಸಲಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
