CHITRADURGA NEWS | 09 SEPTEMBER 2024
ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಶ್ರೀ ಜಯದೇವ ಕ್ರೀಡಾ ಜಾತ್ರೆ ಹೆಸರಲ್ಲಿ ನಾಲ್ಕು ದಿನ ಕ್ರೀಡಾಕೂಟ ನಡೆಯಲಿದೆ ಎಂದು ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.
ನಗರದ ಮುರುಘಾ ಮಠದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾಕೌಟ್ ಮಾದರಿಯಲ್ಲಿ ಹತ್ತು ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿ ಅಕ್ಟೋಬರ್ 1 ರಿಂದ 4 ರವರೆಗೆ ನಡೆಯಲಿದೆ. ಮೊದಲ ಮತ್ತು ಕೊನೆಯ ದಿನ ವರ್ಣ ರಂಜಿತ ಕಾರ್ಯಕ್ರಮ ನಡೆಯಲಿದೆ’ ಎಂದರು.
ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಶ್ರೀ ಬಸವಕುಮಾರ ಸ್ವಾಮೀಜಿ ಮಾತನಾಡಿ, ‘ಶರಣ ಸಂಸ್ಕೃತಿ ಉತ್ಸವ ಹಾಗೂ ಜಯದೇವ ಶ್ರೀಗಳ 150ನೇ ವರ್ಷದ ಅಂಗವಾಗಿ ಮಠದಲ್ಲಿ ಸೆ.25 ರಿಂದ ಅಕ್ಟೋಬರ್ 5 ರವರೆಗೆ ನಿತ್ಯ ಬೆಳಿಗ್ಗ 6 ರಿಂದ 7 ರವರೆಗೆ ಯೋಗ ಮತ್ತು ಆರೋಗ್ಯಮೇಳ ಹಾಗೂ ಪ್ರತಿ ದಿನ ಸಂಜೆ ಜಯದೇವ ಶ್ರೀಗಳ ಕುರಿತು ವಿಶೇಷ ಉಪನ್ಯಾಸ ಮಾಲಿಕೆ ನಡೆಯಲಿದೆ’ ಎಂದು ತಿಳಿಸಿದರು.
ಕ್ರೀಡಾ ಸಮಿತಿ ಅಧ್ಯಕ್ಷ ಶ್ರೀರಾಮ್ ಮಾತನಾಡಿ, ‘ಶರಣ ಸಂಸ್ಕೃತಿ ಉತ್ಸವ ಹಾಗೂ ಜಯದೇವ ಶ್ರೀಗಳ 150ನೇ ಜಯಂತ್ಯುತ್ಸವದ ಅಂಗವಾಗಿ ಅಕ್ಟೋಬರ್ 5,6,7 ರಂದು ಜಯದೇವ ಕಪ್ ಹೆಸರಿನಲ್ಲಿ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಕ್ರೀಡಾಕೂಟ ನಡೆಯಲಿದೆ. ಜಿಲ್ಲೆಯ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳ 17 ವರ್ಷದೊಳಗಿನ ಮಕ್ಕಳಿಗೆ ಕಬಡ್ಡಿ, ಕ್ರಿಕೆಟ್, ಹ್ಯಾಂಡ್ ಬಾಲ್, ಖೋ ಖೋ ಆಯೋಜಿಸಲಾಗಿದೆ ಎಂದರು.
ಕ್ಲಿಕ್ ಮಾಡಿ ಓದಿ: ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಶ್ರದ್ಧಾಂಜಲಿ | 5 ದಿನ ಸಮಾರಂಭ
ಜಿಲ್ಲೆಯ 6 ತಾಲ್ಲೂಕಿನಿಂದ 1,400 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಎಲ್ಲರಿಗೂ ಟೀ ಶರ್ಟ್, ಊಟ, ವಸತಿ ಹಾಗೂ ಪ್ರಯಾಣ ಭತ್ಯೆ ನೀಡಲಾಗುತ್ತದೆ. ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ ನಡೆಯಲಿದೆ ಎಂದು ತಿಳಿಸಿದರು.
ಜೆಎಂಐಟಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ನಡೆಯಲಿದೆ. ಪ್ರಥಮ ಬಹುಮಾನ 8 ತಂಡಗಳಿಗೆ ತಲಾ ಹತ್ತು ಸಾವಿರ, ಟ್ರೋಫಿ, ವೈಯಕ್ತಿಕ ವಿಭಾಗದಲ್ಲಿ ಸಾಧನೆ ಮಾಡಿದವರಿಗೆ 3 ಸಾವಿರ ಕೊಡಲಾಗುತ್ತದೆ ಎಂದು ವಿವರಿಸಿದರು.
ನಿವೃತ್ತ ಡಿಡಿಪಿಐ ಕೆ.ರವಿಶಂಕರ್ ರೆಡ್ಡಿ, ಗ್ರಾಪಂ ಮಾಜಿ ಅಧ್ಯಕ್ಷ ವಿಜಯಕುಮಾರ್, ಶಂಕರಮೂರ್ತಿ, ಸೈಯದ್ ಅನೀಸ್, ಪ್ರಕಾಶ್ ರಾಮನಾಯ್ಕ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
