ಮುಖ್ಯ ಸುದ್ದಿ
Horticulture: ತೊಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಬಸಪ್ಪ ಬೋಗಿ ಅಮಾನತು
CHITRADURGA NEWS | 07 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ತೋಟಗಾರಿಕೆ (Horticulture) ಇಲಾಖೆ ಉಪನಿರ್ದೇಶಕ ಶರಣ ಬಸಪ್ಪ ಬೋಗಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಅಧಿಕಾರ ದುರುಪಯೋಗ, ರೈತರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪದಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ರೂಪ ಅಮಾನತು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ! ಇಲ್ಲಿವೆ ಸುಲಭವಾಗಿ ಅರ್ಥವಾಗುವ 8 ಅಂಶಗಳು
ಯಾದಗಿರಿಯಲ್ಲಿ ಕರ್ತವ್ಯ ನಿರ್ವಹಿಸುವಾಗ ಇವರ ವಿರುದ್ಧ ಆರೋಪ ಕೇಳಿ ಬಂದಿದ್ದವು. ಆನಂತರ ಅವರನ್ನು ಚಿತ್ರದುರ್ಗಕ್ಕೆ ವರ್ಗಾವಣೆ ಮಾಡಲಾಗಿತ್ತು.
ಇದನ್ನೂ ಓದಿ: ನ.13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ | ಅರ್ಜಿ ಆಹ್ವಾನ
ಶರಣಬಸಪ್ಪ ಬೋಗಿ ಅವರ ವಿರುದ್ಧ ದಾಖಲಾಗಿದ್ದ ದೂರುಗಳನ್ನು ಪರಿಶೀಲನೆ ನಡೆಸಿದ ನಂತರ ಅಮಾನತು ಆದೇಶ ಹೊರಡಿಸಲಾಗಿದೆ.
ಸದ್ಯ ಚಿತ್ರದುರ್ಗ ಜಿಲ್ಲೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾಗಿ, ಶಿವಮೊಗ್ಗ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾಗಿರುವ ಜಿ.ಸವಿತಾ ಅವರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ 1156 ಹೆಕ್ಟೇರ್ ಬೆಳೆ ಹಾನಿ | ಆಕ್ಷೇಪಣೆ ಸಲ್ಲಿಕೆಗೆ ಡಿಸಿ ಸೂಚನೆ
ಜಿ.ಸವಿತಾ ಈ ಹಿಂದೆ ಚಿತ್ರದುರ್ಗ ಜಿಲ್ಲೆ ತೊಟಗಾರಿಕೆ ಇಲಾಖೆ ಉಪನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದು, ಕಳೆದ ವರ್ಷ ಶಿವಮೊಗ್ಗಕ್ಕೆ ವರ್ಗಾವಣೆಯಾಗಿದ್ದರು.