CHITRAUDRGA NEWS | 21 MARCH 2026
ಚಿತ್ರದುರ್ಗ: ಬಸವಾದಿ ಶರಣರ ವಚನಗಳನ್ನು ಕೇಳುವುದೇ ಚೆಂದ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ನಾವಿಂದು ವಿಶ್ವದಲ್ಲಿ ಭೀಕರ ಯುದ್ಧದಿಂದ ಆಗುತ್ತಿರುವ ವಿನಾಶದ ಘಟನೆಗಳನ್ನು ಕಾಣುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಸಹೋದರತ್ವ ಭಾವದಿಂದ ಜತೆ ಜತೆಯಾಗಿ ಸಾಗಬೇಕಿದೆ ಎಂದು ಶ್ರೀ ಜಗದ್ಗುರು ಮುರುಘರಾಜೇಂದ್ರ ಬಹನ್ಮಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ. ಕಳಸದ ಹೇಳಿದರು.
ಇದನ್ನೂ ಓದಿ: SJM ಸಂಚಾರಿ ದಂತ ಚಿಕಿತ್ಸಾ ಘಟಕದ ವಾಹನಕ್ಕೆ ಚಾಲನೆ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ಯುಗಾದಿ ನೂತನ ವರ್ಷಾರಂಭದ ನಿಮಿತ್ತ ಚಂದ್ರದರ್ಶನ ಮತ್ತು ವಚನ ಗಾಯನ ಕಾರ್ಯಕ್ರಮದಲ್ಲಿ ಬೇವು-ಬೆಲ್ಲ ಅಲ್ಲಮ ಪ್ರಭುದೇವರ ವಚನಗಳ ಕಿರುಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು,
ಯುಗಾದಿ ಹಬ್ಬದ ಜೊತೆಗೆ ಶ್ರೀಮಠದಲ್ಲಿ ಅಲ್ಲಮಪ್ರಭುದೇವರ ಜಯಂತಿ ಆಚರಿಸುತ್ತಿರುವುದು ಸಂಸತದ ಸಂಗತಿ ಎಂದರು.
ಶ್ರೀ ಬಸವ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಯೋಗಿಗಳಿಗೆ, ಯತಿಗಳಿಗೆ ದೇಹವೇ ದೇವಾಲಯ. ಸುಖವನ್ನು ಬಹಿರಂಗದಲ್ಲಿ ಹುಡುಕಬಾರದು. ಬಹಿರಂಗದ ಛಾಯೆಯನ್ನು ದಾಟಿ ನಿಲ್ಲಬೇಕು ಎಂದು ಹೇಳಿದರು.
ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಡಾ.ಬಸವಪ್ರಭು ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಬಸವಮಹಾಂತ ಸ್ವಾಮೀಜಿ, ಸೇವಾಲಾಲ್ ಸರ್ದಾರ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ, ಬಸವ ಹರಳಯ್ಯ ಸ್ವಾಮೀಜಿ, ತಿಪ್ಪೇರುದ್ರ ಸ್ವಾಮೀಜಿ, ಪೂರ್ಣಾನಂದ ಸ್ವಾಮೀಜಿ, ಆಡಳಿತ ಮಂಡಳಿಯ ಸದಸ್ಯರಾದ ಸಿ.ಎನ್.ಚಂದ್ರಶೇಖರ್, ಜಮುರಾ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್
ಗಾನಯೋಗಿ ಸಂಗೀತ ಬಳಗದವರು ವಚನ ಸಂಗೀತ ನಡೆಸಿಕೊಟ್ಟರು. ಲಿಂಗಾಯತ ವೀರಶೈವ ಸಮಾಜಗಳ ಗಣ್ಯರು, ವಿವಿಧ ಸಮಾಜ, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು, ಅಭಿಮಾನಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
