
CHITRADURGA NEWS | 28 AUGUST 2025
ಚಿತ್ರದುರ್ಗ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್, ಕಾನೂನು ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಶಶಾಂಕ ನಿರಂಜನ ನೇಮಕವಾಗಿರುವುದಾಗಿ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಶ್ರೀಧರ್ ಜಾಧವ್ ತಿಳಿಸಿದ್ದಾರೆ.
ನನ್ನನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ಅತ್ಯಂತ ಗೌರವದ ವಿಷಯವಾಗಿದೆ. ನಾನು ಈ ಜವಾಬ್ದಾರಿಯನ್ನು ಅತ್ಯಂತ ಬದ್ಧತೆ ಮತ್ತು ನಿಷ್ಠೆಯಿಂದ ಸ್ವೀಕರಿಸುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕಾಗಿ, ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಪ್ರಜಾಸತ್ತಾತ್ಮಕ ವ್ಯವಸ್ಥೆಗಾಗಿ, ನಿರಂತರವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡುತ್ತೇನೆ.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ
ನಮ್ಮ ಭಾರತೀಯ ಯುವ ಕಾಂಗ್ರೆಸ್ ಸಂಘಟನೆಯ ದೃಷ್ಟಿಕೋನವನ್ನು ಸದಾ ಉಳಿಸಿಕೊಂಡು ಹೋಗುತ್ತೇನೆ.
ನನ್ನ ನೇಮಕಕ್ಕೆ ಕಾರಣರಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಹಾಗೂ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಶ್ರೀಧರ್ ಜಾಧವ್ ಅವರು ನನ್ನ ಮೇಲೆ ವಿಶ್ವಾಸ ತೋರಿಸಿದ್ದಕ್ಕೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಶಶಾಂಕ ನಿರಂಜನ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
