CHITRADURGA NEWS | 28 JANUARY 2026
ಚಿತ್ರದುರ್ಗ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಇದೇ ಜ.30 ರಿಂದ 31 ರವರೆಗೆ ಚಿತ್ರದುರ್ಗ ನಗರದ ಪ್ರಧಾನ ಅಂಚೆ ಕಚೇರಿ ಪಕ್ಕದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ
ಈ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ನೀಡಲಾಗುವುದಿಲ್ಲ. ತರಬೇತಿಗೆ 25 ಜನರ ಗುರಿ ನಿಗಧಿಪಡಿಸಲಾಗಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್ ಪೋರ್ಟ್ ಸೈಜ್ ಪೋಟೋ, ಬ್ಯಾಂಕ್ ಪಾಸ್ ಬುಕ್ ಪ್ರತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳೊಂದಿಗೆ ತರಬೇತಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9482943111, 9886002248ಗೆ ಸಂಪರ್ಕಿಸುವ0ತೆ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
