CHITRADURGA NEWS | 19 MAY 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷ 25 ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.
ಇದನ್ನೂ ಓದಿ: ತೆಂಗಿನ ಮರಕ್ಕೆ ಪವರ್ ಶಾಕ್ | ಜಮೀನಿಗೆ ಕಾಲಿಡಲು ರೈತರು ಹಿಂದೇಟು

ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಲಿಂಗಾಯತ ಶಿವಶಿಂಪಿ ಸಮಾಜದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆ ಜರುಗಿತು.
ಶಿವಶಿಂಪಿ 2000-2001ನೇ ಸಾಲಿನಲ್ಲಿ ಪ್ರಾರಂಭವಾಗಿ ಇಂದಿಗೆ 25 ವರ್ಷ ಪ್ರಾರಂಭವಾಗಲಿದೆ ಈ ಹಿನ್ನಲೆಯಲ್ಲಿ ಈ ವರ್ಷದ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡಬೇಕಿದೆ ಇದಕ್ಕೆ ಬೇಕಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಲು ತೀರ್ಮಾನಿಸಲಾಯಿತು.
ಇದನ್ನೂ ಓದಿ: ಪರಿಸರ ದಿನಾಚರಣೆ ಪ್ರಯುಕ್ತ ಪ್ರಬಂಧ ಸ್ಪರ್ಧೆ | ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಗೆಲ್ಲಿ
ಆಚರಣೆಯಲ್ಲಿ ಈ ವರ್ಷದ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಶೇ.85 ರಷ್ಟು ಅಂಕಗಳನ್ನು ಪಡೆದ ಪ್ರತಿಭಾವಂತ ಜಿಲ್ಲೆಯ ಶಿವಶಿಂಪಿ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.
ನಮ್ಮ ಸಮಾಜದಲ್ಲಿ ವಿವಿಧ ರೀತಿಯ ಸಾಧನೆಯನ್ನು ಮಾಡಿದ ವಯಸ್ಸಿನ ಮಿತಿ ಇಲ್ಲದೆ ಯಾರು ಬೇಕಾದರೂ ಹೆಸರನ್ನು ನೀಡಬಹುದಾಗಿದೆ. ಇದ್ದಲ್ಲದೆ ಕಾರ್ಯಕ್ರಮಕ್ಕೆ ಹೆಚ್ಚಿನ ರೀತಿಯಲ್ಲಿ ಧನ ಸಹಾಯ ಮಾಡಿದವರನ್ನು ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಗುವುದು.
2024ರ ಕುಲಗುರು ಶ್ರೀ ಶಿವದಾಸಿಮಯ್ಯ ಜಯಂತ್ಯೋತ್ಸವಕ್ಕೆ ದಿನಾಂಕ ನಿಗಧಿಯ ಬಗ್ಗೆ ಮುಂದಿನ ಕಾರ್ಯಾಕಾರಿ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲು ನಿರ್ಧಾರ ಮಾಡಲಾಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಮಾಜದ ಅಧ್ಯಕ್ಷರಾದ ಇ.ಎಸ್.ಜಯದೇವ ಮೂರ್ತಿಯವರು ಮಾತನಾಡಿ, ಕಳೆದ ಎರಡು ವರ್ಷಗಳಿಂದ ನಿಮ್ಮಗಳ ಸಹಕಾರದಿಂದ ಶಿವದಾಸಿಮಯ್ಯರವರು ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರವನ್ನು ಅದ್ದೂರಿಯಾಗಿ ಮಾಡಲಾಗಿದೆ.
ಮುಂದಿನ ದಿನದಲ್ಲಿ ಸಮಾಜದ ಪ್ರಗತಿಗೆ ಎಲ್ಲರು ಸಹಾ ಸಹಕಾರ ನೀಡಬೇಕಿದೆ. ಈ ವರ್ಷ ನಮ್ಮ ಸಮಾಜ 25ನೇ ವರ್ಷ ಪ್ರಾರಂಭವಾಗಲಿದ್ದು, ಇದರ ಏಳ್ಗೆಗೆ ಎಲ್ಲರು ಸಹಾ ಸಹಕಾರ ಮಾಡಿದ್ದಾರೆ ಇದರಲ್ಲಿ ಸಮಾಜದ ಹಿರಿಯರಾದ ಷಣ್ಮುಖಪ್ಪರವರ ನೆರವು ಹೆಚ್ಚಿನ ರೀತಿಯಲ್ಲಿ ಇದೆ ಎಂದರು.
ಇದನ್ನೂ ಓದಿ: ಖಾಸಗಿ ಶಾಲೆ ಶುಲ್ಕದ ಏರಿಕೆಗೆ ಕಡಿವಾಣ ಹಾಕಿ | ಎಎಪಿ ಜಿಲ್ಲಾಧ್ಯಕ್ಷ ಜಗದೀಶ್
ಸಭೆಯಲ್ಲಿ ಜಿಲ್ಲೆಯ ಶಿವಶಿಂಪಿ ಸಮಾಜದ ಗೌರವಾಧ್ಯಕ್ಷ ಡಿ.ಬಿ.ಶಿವಹಾಲಪ್ಪ, ಉಪಾಧ್ಯಕ್ಷ ಎಸ್.ವಿರೇಶ್, ಖಂಜಾಚಿ ನಿರ್ಮಲ ಬಸವರಾಜು, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಮುರುಗೇಶ್ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
