ಮುಖ್ಯ ಸುದ್ದಿ
ಮುರುಘಾ ಮಠ, ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಶಿವಯೋಗಿ ಕಳಸದ್ | ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಧಿಕಾರ
CHITRADURGA NEWS | 06 FEBRUARY 2024
ಚಿತ್ರದುರ್ಗ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಮುರುಘಾ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಶಿವಯೋಗಿ ಸಿ.ಕಳಸದ್ ಅವರನ್ನು ನಿಯೋಜನೆ ಮಾಡಿದೆ.
ಸರ್ಕಾರದ ಆದೇಶದಂತೆ ಶಿವಯೋಗಿ ಸಿ. ಕಳಸದ್ ಬುಧವಾರ ಮುರುಘಾ ಮಠಕ್ಕೆ ಆಗಮಿಸಿ ಕರ್ತೃ ಗದ್ದುಗೆಯಲ್ಲಿ ಪೂಜೆ ಸಲ್ಲಿಸಿ ನಂತರ ಮಠ ಹಾಗೂ ಎಸ್‍ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಇದನ್ನೂ ಓದಿ: ಶಿವರಾತ್ರಿಗೆ ಅಬ್ಬರಿಸಲಿದ್ದಾನೆ ವರುಣ ದೇವ | ಭರ್ಜರಿ ಮಳೆಯ ಮುನ್ಸೂಚನೆ
ಎಸ್‍ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ ಅಧಿಕಾರ ಹಸ್ತಾಂತರಿಸಿದರು. ಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮೀಜಿ, ತಹಶೀಲ್ದಾರ್ ನಾಗವೇಣಿ, ಮುಖಂಡರಾದ ಎಸ್.ಎಂ.ಎಲ್. ತಿಪ್ಪೇಸ್ವಾಮಿ, ಜಿತೇಂದ್ರ, ಆನಂದಪ್ಪ ಹಾಗು ಎಸ್.ಜೆ.ಎಂ. ವಿದ್ಯಾಪೀಠದ ನೌಕರ ವರ್ಗದವರು ಇದ್ದರು.
ಮಠದ ಜವಾಬ್ದಾರಿ ವಹಿಸಿಕೊಂಡ ನಂತರ ಶಿವಯೋಗಿ ಸಿ.ಕಳಸದ್ ಅವರು ಸಂಸ್ಥೆಯ ಕಾಲೇಜುಗಳಿಗೆ ಭೇಟಿ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ ರೈಲ್ವೇ ಯೋಜನೆಗಳಿಗೆ ಶುಕ್ರದೆಸೆ | ನೇರ ರೂಲಯ ಮಾರ್ಗಕ್ಕೆ ಅನುದಾನ ಬಿಡುಗಡೆ
ಜಾಮೀನು ಸಿಕ್ಕಿದ ನಂತರ ಮಠದ ಪೀಠಾಧ್ಯಕ್ಷರಾದ ಶ್ರೀ ಶಿವಮೂರ್ತಿ ಮುರುಘಾ ಶರಣರೇ ಮಠದ ಜವಾಬ್ದಾರಿ ವಹಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಮಾಜಿ ಸಚಿವ ಎಚ್.ಏಕಾಂತಯ್ಯ ಸುಪ್ರೀಂ ಕೋರ್ಟ್‍ನಲ್ಲಿ ದಾವೆ ಹಾಕಿದ್ದರು.
ಈ ಸಂಬಂಧ ವಿಚಾರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದ ನ್ಯಾಯಲಯ ಮಠದ ಆಡಳಿತಕ್ಕೆ ಸಮಿತಿ ನೇಮಿಸಲು ಸೂಚಿಸಿತ್ತು.
ಇದನ್ನೂ ಓದಿ: ಶಿವಮೊಗ್ಗದಲ್ಲಿ ರಾಶಿ ಬೆಲೆ ಮತ್ತೊಂದು ಹೆಜ್ಜೆ ಮುಂದಕ್ಕೆ