CHITRADURGA NEWS | 8 JANUARY 2024
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ನಿವೇಶನಗಳ ಮಾಲೀಕರು ಇ-ಸ್ವತ್ತು ಹಾಗೂ ಮುಟೇಷನ್ (ಆಸ್ತಿ ಹಕ್ಕು ವರ್ಗಾವಣೆ) ಕೋರಿ ಅರ್ಜಿ ಸಲ್ಲಿಸುವಾಗ ಸ್ವಚ್ಛಗೊಳಿಸಿದ ನಿವೇಶನ ಛಾಯಚಿತ್ರ ಸಲ್ಲಿಸುವುದ ಕಡ್ಡಾಯ ಎಂದು ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.

ಬಹಳ ಜನರು ನಿವೇಶನ ಛಾಯಚಿತ್ರಗಳಲ್ಲಿ ಕಸದ ರಾಶಿ, ಗಿಡಗಳು ಬೆಳೆದಿರುವುದು ಕಂಡುಬರುತ್ತಿದೆ. ಇದರಿಂದಾಗಿ ಅಕ್ಕಪಕ್ಕದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.
ಇದನ್ನೂ ಓದಿ: ಹೈವೇನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚನೆ
ನಗರ ಸೌಂದರ್ಯಕ್ಕೂ ಇದು ಹಾನಿ ಉಂಟುಮಾಡುತ್ತದೆ. ಖಾಲಿ ನಿವೇಶನದಲ್ಲಿ ಗಿಡಗಳು ಬೆಳೆದಿರುವುದರಿಂದ ನಿವೇಶನ ಸಂಖ್ಯೆ, ಅಳತೆ ಕಲ್ಲುಗಳು ಛಾಯಚಿತ್ರದಲ್ಲಿ ಕಾಣಿಸುವುದಿಲ್ಲ. ಈ ಕಾರಣದಿಂದಾಗಿ ಇ-ಸ್ವತ್ತು ಪಡೆಯುವ ಸಂದರ್ಭದಲ್ಲಿ ಸಲ್ಲಿಸುವ ಗಿಡ ಗಂಟೆಗಳು, ಕಸದ ರಾಶಿ ಇಲ್ಲದ ಛಾಯಚಿತ್ರಗಳನ್ನೇ ಸಲ್ಲಿಸುವಂತೆ ಸಾರ್ವಜನಿಕರಿಗೆ ಈ ಮನವಿ ಮಾಡಿದ್ದಾರೆ.
ನಿವೇಶನಗಳನ್ನು ಕಾಲ ಕಾಲಕ್ಕೆ ಮಾಲಿಕರು ಸ್ವಚ್ಛಗೊಳಿಸದೇ ಇದ್ದರೇ, ನಿಯಮಾನುಸಾರ ನಗರಸಭೆಯಿಂದ ದಂಡ ವಿಧಿಸಲಾಗುವುದು ಎಂದು ಪೌರಾಯುಕ್ತೆ ಎಂ.ರೇಣುಕಾ ಎಚ್ಚರಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
