CHITRADURGA NEWS | 13 AUGUST 2026
ಚಿತ್ರದುರ್ಗ: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಮೆರೆದಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ‘ಹರ್ ಘರ್ ತಿರಂಗಾ’ ಅಭಿಯಾನ ನಡೆಸಲಾಯಿತು.
ಇದನ್ನೂ ಓದಿ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ
ಅಭಿಯಾನದ ಅಂಗವಾಗಿ ಗುರುವಾರ ವಾರ್ತಾಧಿಕಾರಿ ಜುಂಜಪ್ಪ, ಪತ್ರಕರ್ತರು, ದೃಶ್ಯ ಮಾಧ್ಯಮದ ಪ್ರತಿನಿಧಿಗಳು, ವಕೀಲರು ಹಾಗೂ ಸಾರ್ವಜನಿಕರಿಗೆ ರಾಷ್ಟ್ರಧ್ವಜಗಳನ್ನು ವಿತರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಹಾಗೂ ದೇಶಭಕ್ತಿಯ ಸಂದೇಶವನ್ನು ಸಾರಬೇಕು ಎಂದು ಬಿಜೆಪಿ ಮುಖಂಡರು ಕರೆ ನೀಡಿದರು.
ಇದನ್ನೂ ಓದಿ: ಪಾಳೇದಹಳ್ಳಿಯಲ್ಲಿ ಆಂಜನೇಯಸ್ವಾಮಿ ದೇವಾಲಯದ ಪ್ರತಿಷ್ಠಾಪನೆ | ಆ.15ರಿಂದ ಮೂರು ದಿನಗಳ ಧಾರ್ಮಿಕ ಮಹೋತ್ಸವ
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಯಾದವ್, ಕಾರ್ಯದರ್ಶಿ ರೇಖಾ, ವಕ್ತಾರ ನಾಗರಾಜ್ ಬೇದ್ರೆ, ಸಹ ವಕ್ತಾರ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕಾಂಚನ, ಸುಮ, ವೀಣಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

