CHITRADURGA NEWS | 29 SEPTMBER 2026
ಚಿತ್ರದುರ್ಗ: ವಿಶ್ವ ಪ್ರವಾಸೋದ್ಯಮ ದಿನ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಅಂಗವಾಗಿ ನಗರಸಭೆ ವತಿಯಿಂದ ಭಾನುವಾರ ಇಲ್ಲಿನ ಐತಿಹಾಸಿಕ ಚಿತ್ರದುರ್ಗ ಕೋಟೆ ಹಾಗೂ ಸ್ಮಾರಕಗಳ ಆವರಣದಲ್ಲಿ ಶ್ರಮದಾನ ಹಾಗೂ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಇದನ್ನೂ ಓದಿ: ಅ.3ರ ಹಿಂದೂ ಮಹಾಗಣಪತಿ ಶೋಭಾಯಾತ್ರೆ | 4 ಲಕ್ಷ ಜನರ ನಿರೀಕ್ಷೆ, ಬಿಗಿ ಭದ್ರತೆ | ಎಸ್ಪಿ ಕುಶಾಲ್ ಚೌಕ್ಸೆ
‘ಕೋತಿರಾಜ್’ ಎಂದೇ ಪ್ರಸಿದ್ಧರಾದ ಜ್ಯೋತಿರಾಜ್ ಅವರ ನೇತೃತ್ವದಲ್ಲಿ ನಡೆದ ಈ ಅಭಿಯಾನದಲ್ಲಿ ನಗರಸಭೆ ಸಿಬ್ಬಂದಿ ಹಾಗೂ ಪ್ರಮುಖರು ಪಾಲ್ಗೊಂಡು ಕೋಟೆಯ ಮುಂಭಾಗ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಜಡಗೊಂಡಿದ್ದ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು.
ನಂತರ ಕೋಟೆಯ ಆವರಣದಲ್ಲಿ ವೃತ್ತಾಕಾರದಲ್ಲಿ ಸಾಲಾಗಿ ನಿಂತು ಮಾನವ ಸರಪಳಿ ನಿರ್ಮಿಸಿದ ಭಾಗವಹಿಸಿದವರು, ದೇಶ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಸ್ವಯಂಪ್ರೇರಿತರಾಗಿ ಶ್ರಮಿಸುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ವಾರಕ್ಕೆ ಕನಿಷ್ಠ ಎರಡು ಗಂಟೆಗಳ ಕಾಲ ಸ್ವಚ್ಛತಾ ಕಾರ್ಯಕ್ಕೆ ಸಮಯ ಮೀಸಲಿಡುವುದಾಗಿ ಈ ಸಂದರ್ಭದಲ್ಲಿ ಸಂಕಲ್ಪ ಮಾಡಲಾಯಿತು.
ಇದನ್ನೂ ಓದಿ: ರಾಜ್ಯದ 69 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ್ ಜೋಡೋ ಯಾತ್ರೆ | ಬಿ.ಕೆ.ಹರಿಪ್ರಸಾದ್
ಐತಿಹಾಸಿಕ ಸ್ಮಾರಕಗಳು ಹಾಗೂ ಪ್ರವಾಸಿ ತಾಣಗಳ ನೈರ್ಮಲ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂಬ ಸಂದೇಶವನ್ನು ಈ ಜಾಗೃತಿ ಅಭಿಯಾನದ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಯಿತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

