CHITRADURGA NEWS | 09 SEPTEMBER 2026
ಚಿತ್ರದುರ್ಗ: 2026-27ನೇ ಸಾಲಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ವರ್ಗಗಳ ಜನಾಂಗದ ಏಳಿಗೆಗಾಗಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಶ್ರಮಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಸೆ.12ರಂದು ಕೃಷಿಮೇಳ ಹಾಗೂ ಕುಸ್ತಿಪಂದ್ಯಾವಳಿ ಪೂರ್ವಭಾವಿ ಸಭೆ
ಅಭ್ಯರ್ಥಿಗಳು ನಿಗಧಿತ ನಮೂನೆಯಲ್ಲಿ ತಮ್ಮ ಪೂರ್ಣ ದಾಖಲಾತಿಗಳೊಂದಿಗೆ ಚಿತ್ರದುರ್ಗ ನಗರದ ಜೆಸಿಆರ್ ಬಡಾವಣೆ, 4ನೇ ಕ್ರಾಸ್ (ಪೂರ್ವ) ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ ಹಾಗೂ ಆಯಾ ತಾಲ್ಲೂಕಿನ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 25ರೊಳಗಾಗಿ ಆಯಾ ತಾಲ್ಲೂಕಿನ ಕಚೇರಿಗೆ ಸಂಜೆ 5.30ರೊಳಗಾಗಿ ಸಲ್ಲಿಸಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಹಾಗೂ ತಾಲ್ಲೂಕು ಮಟ್ಟದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ.
ಷರತ್ತುಗಳು: ಅರ್ಜಿದಾರರ ವಯಸ್ಸು ಕನಿಷ್ಟ 35 ವರ್ಷದವರಾಗಿರಬೇಕು. ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದಿಲ್ಲ ಎಂಬುದಕ್ಕೆ ಸ್ವಯಂ ದೃಢೀಕರಣ ಪ್ರಮಾಣ ಪತ್ರ ಸಲ್ಲಿಸುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
ಅರ್ಜಿದಾರರು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿರುವ ಬಗ್ಗೆ ವೈಯಕ್ತಿಕ ವಿವರಗಳೊಂದಿಗೆ ದಾಖಲೆಗಳ ಸಹಿತ ಅರ್ಜಿ ಸಲ್ಲಿಸುವುದು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಹೆಚ್.ದಿವಾಕರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

