CHITRADURGA NEWS | 18 NOVEMBER 2025
ಚಿತ್ರದುರ್ಗ: ನಗರದ ಬುರುಜನಹಟ್ಟಿಯಲ್ಲಿ ನೆಲೆಸಿರುವ ಶ್ರೀ ಮಲೆನಾಡು ಚೌಡೇಶ್ವರಿ ದೇವಿಯ ಗಂಗಾ ಪೂಜೆ ಮತ್ತು ಕಡೇ ಕಾರ್ತಿಕ ಜಾತ್ರಾ ಮಹೋತ್ಸವ ನ.18 ರಿಂದ 23 ರವರೆಗೆ ಆಯೋಜಿಸಲಾಗಿದೆ.
ಇದನ್ನೂ ಓದಿ: ಜೆಸಿಆರ್ ಬಡಾವಣೆಯಲ್ಲಿ ವಿದ್ಯುತ್ ಟ್ರಾನ್ಸ್‌ಫರ್ಮರ್‌ಗೆ ಬೆಂಕಿ
ಮಂಗಳವಾರ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಹಾಗೂ ಮಂಗಳಸ್ಥಾನ, ಗೋ-ಪೂಜೆ, ಕಂಕಣಧಾರಣೆ ಮತ್ತು ಮದುವಣಗಿತ್ತಿ ಶಾಸ್ತ್ರ ನೆರವೇರಿದ ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿನಿಯೋಗಿಸಲಾಯಿತು.
ನ.19ರ ಬೆಳಗ್ಗೆ 10ಕ್ಕೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಹಾಗೂ ಮಹಾ ಮಂಗಳಾರತಿ, ಸಂಜೆ 7ಕ್ಕೆ ಅಮ್ಮನವರಿಗೆ ಉಯ್ಯಲೋತ್ಸವ ಆಯೋಜಿಸಲಾಗಿದೆ. ನ.20ರ ಬೆಳಗ್ಗೆ 8ಕ್ಕೆ ಅಮ್ಮನವರಿಗೆ ಭಂಡಾರದ ಪೂಜೆ, ಬೆಳಗ್ಗೆ 11.30ಕ್ಕೆ ಕರುವರ್ತಿ ಈಶ್ವರನ ಪುಷ್ಕರಣಿಯಲ್ಲಿ ಗಂಗಾ ಪೂಜೆ ಮತ್ತು ಕುಂಭ ಪೂಜೆ ನೆರವೇರಿಸಲಾಗುತ್ತದೆ. ಮಧ್ಯಾಹ್ನ 3ಕ್ಕೆ ವಿಶೇಷ ಹೂವಿನ ಅಲಂಕಾರ ಮತ್ತು ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನ ತಲುಪಲಿದೆ.
ನ.21ರ ಬೆಳಗ್ಗೆ 10ಕ್ಕೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಮತ್ತು ಅಲಂಕಾರ ನಂತರ ಮಹಾ ಮಂಗಳಾರತಿ, ಸಂಜೆ 6.30ಕ್ಕೆ ದೇವಸ್ಥಾನದ ಆವರಣದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.
ಇದನ್ನೂ ಓದಿ: ಹಿರಿಯೂರು ತಾಲೂಕಿನಲ್ಲಿ ಕೆಇಬಿ ಸ್ಟೇಷನ್ | ವಿಕಾಸಸೌಧದಲ್ಲಿ ಸಚಿವ ಡಿ.ಸುಧಾಕರ್ ಸಭೆ
ನ.22ರ ಬೆಳಗ್ಗೆ 8ಕ್ಕೆ ಬುರುಜನಹಟ್ಟಿ, ಚಿಕ್ಕಪೇಟೆ, ದೊಡ್ಡಪೇಟೆ, ಕಾಮನಬಾವಿ ಬಡಾವಣೆ, ಜೋಗಿಮಟ್ಟಿ ರಸ್ತೆ, ಟೀರ‍್ಸ್ ಕಾಲನಿ, ಸಾಧಿಕ್ ನಗರ, ಕೆಳಗೋಟೆ ಭಕ್ತರ ಮನೆಗಳಲ್ಲಿ ಹಾಗೂ ನ.23ರ ಬೆಳಗ್ಗೆ 9ಕ್ಕೆ ನಗರದ ನಾನಾ ಬಡಾವಣೆಗಳ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಲಾಗುತ್ತದೆ ಎಂದು ಶ್ರೀ ಮಲೆನಾಡು ಚೌಡೇಶ್ವರಿ ಸೇವಾ ಟ್ರಸ್ಟ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
