
CHITRADURGA NEWS | 03 JULY 2025
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಗುರುವಾರ ವಿಚಾರಣಾ ಪ್ರಕ್ರಿಯೆ ಭಾಗವಾಗಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗ್ಗೆಯಿಂದ ಸಂಜೆವರೆಗೆ ನ್ಯಾಯಾಲಯದಲ್ಲಿದ್ದು ಸಿಆರ್‌ಪಿಸಿ 313 ಹೇಳಿಕೆ ನೀಡಿದರು.
ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆ ವೇಳೆಗೆ ದಾವಣಗೆರೆಯಿಂದ ನೇರವಾಗಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದರು.
ಸಂಜೆ 5 ಗಂಟೆವರೆಗೆಎ-1 ಆರೋಪಿಯಾಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು, ಎ-2 ರಶ್ಮಿ ಹಾಗೂ ಎ-3 ಪರಮಶಿವಯ್ಯ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು.
ಒಟ್ಟು 51 ಸಾಕ್ಷ್ಯಗಳ ಹೇಳಿಕೆಗೆ ಶ್ರೀಗಳ ಪ್ರತಿಕ್ರಿಯೆ ಪಡೆದುಕೊಳ್ಳಲಾಗಿದೆ. ಹೇಳಿಕೆಯ ನಂತರ ಶ್ರೀಗಳು ನ್ಯಾಯಾಲಯದಿಂದ ನೇರವಾಗಿ ದಾವಣಗೆರೆಗೆ ತೆರಳಿದರು.
Also Read: ಮುರುಘೇಶನ ಆಶೀರ್ವಾದದಿಂದ ಬಿಡುಗಡೆ | ಮುರುಘಾ ಶರಣರು
ಶ್ರೀಗಳ ದಾಖಲಾಗಿದ್ದ ಮತ್ತೊಂದು ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‌ಶಿಟ್ ಬಿ ಗೆ ಸಂಬಂಧಿಸಿದಂತೆ ಜುಲೈ 10 ರಂದು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರಾಗಲು ತಿಳಿಸಲಾಗಿದೆ.
ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರಪ್ಪ ಚನ್ನಬಸಪ್ಪ ಹಡಪದ ಅವರ ಎದುರು ಹೇಳಿಕೆಗಳನ್ನು ದಾಖಲಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
