ಮುಖ್ಯ ಸುದ್ದಿ
ಅಯೋಧ್ಯೆಗೆ ತೆರಳಿದ ಕೋಟೆನಾಡಿನ ಮಠಾಧೀಶರು | ಶ್ರೀರಾಮ ಪ್ರಾಣಪ್ರತಿಷ್ಠಾಪನೆಯಲ್ಲಿ ಜಿಲ್ಲೆಯ ಶ್ರೀಗಳು ಭಾಗೀ

CHITRADURGA NEWS | 20 JANUARY 2024
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಿಂದ ಅಯೋಧ್ಯೆಗೆ ತೆರಳಿದ ಮಠಾಧೀಶರಿಗೆ ಭಕ್ತರು ಗೌರವಿಸಿ, ಆರತಿ ಬೀಳ್ಕೊಟ್ಟರು.
ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಜನವರಿ 22 ರಂದು ನಡೆಯಲಿರುವ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆಯ ನಾಲ್ವರು ಮಠಾಧೀಶರು ತೆರಳಿದ್ದಾರೆ.

ಇದನ್ನೂ ಓದಿ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಮುಹೂರ್ತದಲ್ಲೇ ಚಿತ್ರದುರ್ಗದ ಮಗುವಿಗೆ ರಾಮನೆಂದು ನಾಮಕರಣ
ನಗರದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸನ್ಮಾನಿಸಿ ಬೀಳ್ಕೊಟ್ಟರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರನ್ನೂ ಭಕ್ತರು ಗೌರವಿಸಿ ಬೀಳ್ಕೊಟ್ಟಿದ್ದಾರೆ.
ಹೊಸದುರ್ಗ ತಾಲೂಕಿನ ಕುಂಚಿಟಿಗ ಮಠದ ಶ್ರೀ ಶಾಂತವೀರ ಸ್ವಾಮೀಜಿ ಅವರನ್ನು ಕೂಡಾ ಮಠದ ಭಕ್ತರು ಗೌರವಿಸಿ ಅಯೋಧ್ಯೆಗೆ ಕಳುಹಿಸಿಕೊಟ್ಟಿದ್ದಾರೆ.
ಇದನ್ನೂ ಓದಿ: ಹಕ್ಕಿ ಗೂಡಿಗೆ ಆಹಾರ ಕಲ್ಪಿಸಿದ ಶ್ರೀಗಳು
ಶ್ರೀ ಶಾಂತವೀರ ಸ್ವಾಮೀಜಿ ಹಾಗೂ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮುರುಘಾ ಮಠದಲ್ಲಿರುವ ಶ್ರೀ ಮುರುಗಿ ಶಾಂತವೀರ ಸ್ವಾಮಿಗಳ ಕರ್ತೃ ಗದ್ದುಗೆಗೆ ಭೇಟಿ ನೀಡಿ ಆಶೀರ್ವಾದ ಪಡೆದು ಪೂಜೆ ಸಲ್ಲಿಸಿ ಅಯೋಧ್ಯೆಗೆ ತೆರಳಿದರು. ಈ ವೇಳೆ ಮಠದಲ್ಲಿ ಇಬ್ಬರೂ ಶ್ರೀಗಳನ್ನು ಗೌರವಿಸಲಾಯಿತು.
ಇದನ್ನೂ ಓದಿ: ಅಯೋಧ್ಯೆಗೆ ಶ್ರೀ ಮಾದಾರ ಚನ್ನಯ್ಯ ಶ್ರೀಗಳಿಗೆ ಆಹ್ವಾನ
ಇನ್ನೂ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರನ್ನೂ ಮಠದಲ್ಲಿ ಭಕ್ತರು ಗೌರವಿಸಿ ಬೀಳ್ಕೊಟ್ಟಿದ್ದಾರೆ.

ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿಗೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಸನ್ಮಾನಿಸಿ ಬೀಳ್ಕೊಟ್ಟರು.
ಜಿಲ್ಲೆಯ ನಾಲ್ವರು ಮಠಾಧೀಶರ ಜೊತೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹರಿಹರ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ಸೇರಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಅಯೋಧ್ಯೆಗೆ ಶ್ರೀ ಶಾಂತವೀರ ಸ್ವಾಮೀಜಿಗೆ ಆಹ್ವಾನ
ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳಿರುವ ಎಲ್ಲ ಮಠಾಧೀಶರು, ಅಲ್ಲಿಂದ ವಿಮಾನದ ಮೂಲಕ ಲಕ್ನೋ ತಲುಪಲಿದ್ದಾರೆ. ಲಕ್ನೋದಿಂದ ಅಯೋಧ್ಯೆಗೆ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ.
ಅಯೋಧ್ಯೆಯಲ್ಲಿ ದೇಶದ ಸುಮಾರು 4 ಸಾವಿರ ಸಾಧು ಸಂತರು, ಗಣ್ಯರು ಸೇರಲಿದ್ದು, ವಾಸ್ತವ್ಯಕ್ಕೆ ಸುಸಜ್ಜಿತವಾದ ಟೆಂಟ್ ಸಿಟಿ ನಿರ್ಮಾಣ ಮಾಡಲಾಗಿದೆ. ಎಲ್ಲ ಗಣ್ಯರು ಅಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಅಯೋಧ್ಯೆಗೆ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗೆ ಆಹ್ವಾನ
