CHITRADURGA NEWS | 08 JANUARY 2026
ಹೊಳಲ್ಕೆರೆ: ಎರಡು ದಿನಗಳ ಕಾಲ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ನಡೆಯುವ ಸಿದ್ದರಾಮೇಶ್ವರ ಅವರ 853 ನೇ ಜಯಂತಿ ಅದ್ದೂರಿಯಾಗಿ ನಡೆಯುವುದರಲ್ಲಿ ಅನಮಾನವಿಲ್ಲ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಮದುವೆ ಮಾಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ
ಜ.14 ಮತ್ತು 15 ರಂದು ನಡೆಯುವ ಜಯಂತಿ ಹಿನ್ನೆಲೆಯಲ್ಲಿ ಶಾಸಕ ಡಾ.ಎಂ.ಚಂದ್ರಪ್ಪನವರು ಜಯಂತಿ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ವೀಕ್ಷಿಸಿ ಮಾತನಾಡಿದರು.
ಜ.14 ರಂದು ಬಿಜೆಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಮಾಜಿ ಮಂತ್ರಿಗಳು ಶಾಸಕರುಗಳು ಭಾಗವಹಿಸಲಿದ್ದಾರೆ. 15 ರಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳುವರು.
ಮಧ್ಯಾಹ್ನ 2.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿದ್ದರಾಮೇಶ್ವರರ ಜಯಂತಿಗೆ ಆಗಮಿಸಲಿದ್ದಾರೆ.
ಇದನ್ನೂ ಓದಿ: 25 ಜನ ರೈತರಿಗೆ ಕುರಿ ಮತ್ತು ಮೇಕೆ ಸಾಕಣಿಕೆ ತರಬೇತಿ
ಎರಡು ದಿನಗಳ ಕಾಲ ನಡೆಯುವ ಜಯಂತಿಯಲ್ಲಿ ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿದ್ದು, ನನಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
