CHITRADURGA NEWS | 07 JANUARY 2026
ಚಿತ್ರದುರ್ಗ: ಬರುವ ಜನವರಿ 14 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಪ್ರಭಾರ ಉಪವಿಭಾಗಧಿಕಾರಿ ಎನ್.ವೆಂಕಟೇಶ್ ನಾಯ್ಕ್ ಹೇಳಿದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಡಾ.ಆಕಾಶ್ ಭೇಟಿ | ಅಂಗನವಾಡಿ, ಗ್ರಂಥಾಲಯ ಪರಿಶೀಲನೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿಯನ್ನು ಸುವ್ಯವಸ್ಥಿತ ಹಾಗೂ ಶಾಂತಿಯುತವಾಗಿ ಆಚರಿಸುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಿಗೆ ಸೂಕ್ತ ಭದ್ರತೆ ನೀಡಬೇಕು.
ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬೇಕು. ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳನ್ನು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು.
ಇದನ್ನೂ ಓದಿ: ಸೋಲಾರ್ ಪ್ಲಾಂಟ್ ಅಳವಡಿಕೆಗೆ ರೈತರ ವಿರೋಧ | ಡಿಸಿ ಕಚೇರಿ ಎದುರು ಪ್ರತಿಭಟನೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಯೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ವೇದಿಕೆಯ ಮೇಲೆ ಸಿದ್ದರಾಮೇಶ್ವರ ಭಾವಚಿತ್ರವನ್ನು ಇರಿಸಿ, ಗಣ್ಯರಿಂದ ಪುಷ್ಪ ನಮನ ಸಲ್ಲಿಸಲು ಅವಕಾಶ ಕಲ್ಪಿಸಬೇಕು.
ಯಾವುದೇ ಅಡಚಣೆಗಳು ಉಂಟಾಗದಂತೆ ಸಮನ್ವಯದಿಂದ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಉಪವಿಭಾಗಧಿಕಾರಿ ವೆಂಕಟೇಶ್ ನಾಯ್ಕ್ ಹೇಳಿದರು.
ಜಯಂತಿ ಕಾರ್ಯಕ್ರಮದಲ್ಲಿ ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೋ.ಬಸವರಾಜ.ಟಿ.ಬೆಳಗಟ್ಟ ಅವರು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜೀವನ, ಸಾಧನೆ, ಬೋಧನೆಗಳ ಕುರಿತು ಉಪನ್ಯಾಸ ನೀಡವರು.
ಇದೇ ವೇಳೆ ಗೀತಗಾಯನ ಕಾರ್ಯಕ್ರಮವು ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ್ ಸಭೆಯಲ್ಲಿ ತಿಳಿಸಿದರು.
ಇದನ್ನೂ ಓದಿ: ವಿಮಾನ ಹತ್ತಿದ ಸರ್ಕಾರಿ ಶಾಲೆ ಮಕ್ಕಳು | ದೆಹಲಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ನೆರವು
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ತಹಶೀಲ್ದಾರ್ ಗೋವಿಂದರಾಜು, ಭೋವಿ ಸಮಾಜದ ಮುಖಂಡರುಗಳಾದ ತಿಪ್ಪೇಸ್ವಾಮಿ, ಲಕ್ಷ್ಮಣ್, ಗೀತಾ ಗೋವಿಂದರಾಜು, ಮಂಜುನಾಥ್, ಡಿ.ಸಿ.ಮೋಹನ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
