ಮುಖ್ಯ ಸುದ್ದಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಏಕವನಚ ಬಳಕೆ | ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸಿದ ಸಿದ್ದರಾಮಯ್ಯ

CHITRADURGA NEWS | 29 JANUARY 2024
ಚಿತ್ರದುರ್ಗ: ಚಿತ್ರದುರ್ಗದಲ್ಲಿ ನಡೆದ ಶೋಷಿತ ವರ್ಗಗಳ ಜಾಗೃತಿ ಸಮಾವೇಶದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಮಾತನಾಡುತ್ತಾ ಏಕವಚನ ಬಳಕೆಯಾಗಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.
ಗ್ರಾಮೀಣ ಪ್ರದೇಶದಿಂದ ಬಂದ ನನ್ನಂಥವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಬೋಧಿಸುವುದು ರೂಢಿ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾ ಮಾಡಲು ಎಚ್‍ಡಿಕೆ ಆಗ್ರಹ
ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವ ಇದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಭವನ ಉದ್ಘಾಟನೆಗೆ ಬಿಜೆಪಿ ನಾಯಕರು ಆಹ್ವಾನ ನೀಡದೇ ಅವಮಾನಿಸಿರುವುದು ನನಗೆ ತೀವ್ರ ನೋವು ಇಂಟ ಮಾಡಿದ್ದು ಮಾತ್ರವಲ್ಲ, ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: ದಿವ್ಯಪ್ರಭು ಜಿ.ಆರ್.ಜೆ ಧಾರವಾಡ ಜಿಲ್ಲಾಧಿಕಾರಿ
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿದ್ದರಾಮಯ್ಯ ಭಾಷಣ ಮುಗಿದ ಕೆಲವೇ ಹೊತ್ತಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಸಿದ್ದರಾಮಯ್ಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಆರೆಸ್ಸೆಸ್ಸ್-ಬಿಜೆಪಿ ಮೀಸಲಾತಿ ವಿರೋಧಿಗಳು
ರಾಷ್ಟ್ರಪತಿ ದ್ರೌಪದಮಿ ಮುರ್ಮು ಅವರ ಬಗ್ಗೆ ಏಕವಚನ ಬಳಕೆ ಮಾಡಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದರು.
ಸಿದ್ದರಾಮಯ್ಯ ಭಾಷಣದ ಈ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಇದರಿಂದ ಎಚ್ಚೆತ್ತ ಸಿದ್ದರಾಮಯ್ಯ ಬಾಯ್ತಪ್ಪನಿಂದ ಆಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುವ ಮೂಲಕ ವಿವಾದಕ್ಕೆ ಇತಿಶ್ರೀ ಹಾಡಿದ್ದಾರೆ.
