
CHITRADURGA NEWS | 04 APRIL 2024
ಚಿತ್ರದುರ್ಗ: ಲೋಕಸಭಾ ಚುನಾವಣೆ ಪ್ರಚಾರಕ್ಕೆ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಯಾಣಿಸಿದ ಹೆಲಿಕಾಪ್ಟರ್‍ನ್ನು ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕಂದನ ಕೊಂದು ಸೂಟ್‍ಕೇಸಿನಲ್ಲಿ ತುಂಬಿಕೊಂಡು ಬಂದಿದ್ದ ಮಹಿಳೆ ವಿರುದ್ಧ ಚಾಜ್‍ರ್ಶೀಟ್
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಧ್ಯಾಹ್ನ 12.45ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಎಂ.ಕೆ.ಹಟ್ಟಿ ಎಸ್.ಜೆ.ಎಂ.ಆಂಗ್ಲ ಮಾಧ್ಯಮ ಶಾಲಾ ಅವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು. ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಧ್ಯಾಹ್ನ 1:30ರ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಜೆ.ಎಂ.ಐ.ಟಿ ಕ್ಯಾಂಪಸ್ ಆವರಣದ ಹೆಲಿಪ್ಯಾಡ್‍ಗೆ ಆಗಮಿಸಿದರು.
ಇದನ್ನೂ ಓದಿ: ಪಕ್ಷೇತರ ಸ್ವರ್ಧೆಗೆ ಗೂಳಿಹಟ್ಟಿ ಡಿ.ಶೇಖರ್ ಸಿದ್ದತೆ
ಈ ವೇಳೆ ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿ ಎಂ.ಕಾರ್ತಿಕ್ ಹಾಗೂ ಎಸ್.ಎಸ್.ಟಿ ತಂಡಗಳು ಹೆಲಿಕಾಪ್ಟರ್‍ನ್ನು ತಪಾಸಣೆ ಮಾಡಿದರು. ಚಿತ್ರದುರ್ಗ ತಹಶೀಲ್ದಾರ್ ಡಾ.ನಾಗವೇಣಿ, ಉಪ ತಹಶೀಲ್ದಾರ್ ನಾಗರಾಜ್ ಸೇರಿದಂತೆ ಮತ್ತಿತರರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
