
CHITRADURGA NEWS | 31 MAY 2026
ಚಿತ್ರದುರ್ಗ: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಿರುವುದು ಕೇವಲ ಕುರುಬರಿಗಷ್ಟೆ ಅಲ್ಲ. ಇಡಿ ಅಹಿಂದ ವರ್ಗಕ್ಕೆ ನೋವುಂಟಾಗಿದೆ ಎಂದು ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್ ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ
ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕುರಿ ಕಾಯುತ್ತಿದ್ದ ಹುಡುಗ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬೆಳೆದಿದ್ದಾರೆಂದರೆ
ಕಮ್ಮಿ ಸಾಧನೆಯಲ್ಲ. ಅಹಿಂದ ಸಂಘಟಕ ಸಿದ್ದರಾಮಯ್ಯ ಕಾಂಗ್ರೆಸ್‍ಗೆ ಬಂದಾಗ ವರಿಷ್ಟರು ಸ್ವಾಗತಿಸಿ ಎರಡು ಬಾರಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು.
ಎರಡನೆ ಬಾರಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಬಡವರು, ದೀನ ದಲಿತರು, ಶೋಷಿತರು, ಧ್ವನಿಯಿಲ್ಲದವರಿಗೆ ಶಕ್ತಿ ತುಂಬಿದರು. ವರಿಷ್ಟರ ಸೂಚನೆಯಂತೆ ರಾಜಿನಾಮೆ ನೀಡಿರುವುದು ನಮಗೆಲ್ಲಾ ನೋವಾಗಿದ್ದರು. ಮತ್ತೊಂದು ಕಡೆ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ನಾವುಗಳು ಸ್ವಾಗತಿಸುತ್ತೇವೆಂದು ತಿಳಿಸಿದರು.
ಮೂರನೆ ಅತಿ ದೊಡ್ಡ ಸಮುದಾಯ ನಮ್ಮದು. ಜೆಡಿಎಸ್ ನಲ್ಲಿ ನಮಗೆ ಅವಕಾಶ ಕಡಿಮೆಯಿದೆ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಸಮಾಜಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು. ಜೊತೆಗೆ ರಾಜ್ಯದಲ್ಲಿ ಎರಡನೆ ಅವಧಿಯ ನಿಗಮ ಮಂಡಳಿಗಳ ನೇಮಕದಲ್ಲಿ ನಮ್ಮ ಜನಾಂಗಕ್ಕೆ ಒತ್ತು ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಬಿ.ಜಿ.ಗೋವಿಂದಪ್ಪನವರನ್ನು ರಾಜ್ಯ ಸಚಿವ ಸಂಪುಟದಲ್ಲಿ ಮಂತ್ರಿಯನ್ನಾಗಿ ಮಾಡಬೇಕು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆಯಲ್ಲಿ ಜೂನ್ 04 ರಂದು ಕೆ.ಡಿ.ಪಿ ಸಭೆ
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಪಪ್ಪಿ ಇವರುಗಳಿಗೂ ಸಚಿವ ಸ್ಥಾನ ಕೊಡಬೇಕೆಂದು ವರಿಷ್ಟರನ್ನು ಒತ್ತಾಯಿಸಿದರು.
ಡಿ.ಕೆ.ಶಿವಕುಮಾರ್‍ರವರ ಮಂತ್ರಿ ಮಂಡಲದಲ್ಲಿ ಕುರುಬರಿಗೆ ಐದು ಸಚಿವ ಸ್ಥಾನ ಸಿಗಬೇಕು. ಏಳು ವಿಧಾನಪರಿಷತ್ ಸ್ಥಾನ ಖಾಲಿಯಾಗುತ್ತಿದೆ. ರಾಜ್ಯಸಭೆಗೂ ನಡೆಯುವ ಚುನಾವಣೆಯಲ್ಲಿ ಕುರುಬರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಬೇಕೆಂದು ಬಿಜೆಪಿ, ಜೆಡಿಎಸ್ ನವರಿಗೂ ಆಗ್ರಹಿಸಿದ ಬಿ.ಟಿ.ಜಗದೀಶ್, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುರುಬ ಸಮುದಾಯದ ಸಮೀಕ್ಷೆಯನ್ನು ಸಿದ್ದರಾಮಯ್ಯನವರು ಸ್ವೀಕಾರ ಮಾಡಿರುವುದನ್ನು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅಂಗೀಕರಿಸಿ ಯಥಾವತ್ತಾಗಿ ಜಾರಿಗೊಳಿಸಬೇಕು. ಇದರಿಂದ ಹಿಂದುಳಿದ 104 ಜಾತಿಗಳಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಂ ಮಾತನಾಡಿ ನೂತನವಾಗಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಓಬಿಸಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಜಿಲ್ಲೆಯ ನಾಲ್ವರು ಶಾಸಕರುಗಳಿಗೆ ಸಚಿವ ಸ್ಥಾನ ಸಿಗಬೇಕು. ತಳಮಟ್ಟದ ಕುರುಬ ಜನಾಂಗವನ್ನು ನಿಮ್ಮ ಜೊತೆ ವಿಶ್ವಾಸದಲ್ಲಿಟ್ಟುಕೊಂಡು ಹೆಚ್ಚಿನ ಸ್ಥಾನಮಾನ ಕಲ್ಪಿಸುವಂತೆ ಮನವಿ ಮಾಡಿದರು.
ಇದನ್ನೂ ಓದಿ: ವಿದ್ಯಾರ್ಥಿ ಬಸ್ ಪಾಸ್‍ಗೆ ಅರ್ಜಿ ಆಹ್ವಾನ | ಯಾವರೀತಿ ಅರ್ಜಿ ಸಲ್ಲಿಸುವುದು..ಇಲ್ಲಿದೆ ಮಾಹಿತಿ
ಜಿಲ್ಲಾ ಕುರುಬರ ಸಂಘದ ಗೌರವಾಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ಚೆಕ್‍ಡ್ಯಾಂಗಳ ರಾಜ ಎಂದೆ ಪ್ರಸಿದ್ದಿಯಾಗಿರುವ ಹೊಸದುರ್ಗದ ಹಿರಿಯ ಶಾಸಕ ಬಿ.ಜಿ.ಗೋವಿಂದಪ್ಪನವರಿಗೆ ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ನಾಲ್ಕು ಬಾರಿ ಶಾಸಕರಾಗಿರುವ ಇವರಿಗೆ ರಾಜಕಾರಣದಲ್ಲಿ ಅಪಾರ ಅನುಭವವಿದೆ. ಹಾಗಾಗಿ ಪರಿಗಣನೆಗೆ ತೆಗೆದುಕೊಂಡು ಕುರುಬ ಸಮಾಜಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುತ್ತು, ಮಾಳೇಶ್, ಉಮೇಶ್, ಕುರುಬರ ಸಂಘದ ನಿರ್ದೇಶಕ ಹೊಸದುರ್ಗದ ಲಿಂಗಮೂರ್ತಿ, ಸುರೇಶ್ ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

