ಮುಖ್ಯ ಸುದ್ದಿ
ಸಿದ್ದರಾಮಯ್ಯ, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ ಇದ್ದಂತೆ..
CHITRADURGA NEWS | 30 JUNE 2024
ಚಿತ್ರದುರ್ಗ: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕರ್ನಾಟಕದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೋಹ್ಲಿ ಇದ್ದಂತೆ. ಇಬ್ಬರೂ ಸೇರಿ ಉತ್ತಮ ಆಡಳಿತ ನಡೆಸಲಿ ಎಂದು ಹರಿಹರ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮೀಜಿ ವಿಶ್ಲೇಷಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೋಹ್ಲಿ ಇಬ್ಬರೂ ಸೇರಿ ಭಾರತಕ್ಕೆ ವಿಶ್ವಕಪ್ ತಂದು ಕೊಟ್ಟಿದ್ದಾರೆ. ಅದೇ ರೀತಿ, ಕರ್ನಾಟಕದಲ್ಲಿ ಇವರಿಬ್ಬರು ಉತ್ತಮ ಆಡಳಿತ ನಡೆಸಲಿ ಎಂದರು.
ಇದನ್ನೂ ಓದಿ: ಬಯಲು ಸೀಮೆಯ ಊಟಿ | ಸ್ವರ್ಗವ ನಾಚಿಸುವ ಜೋಗಿಮಟ್ಟಿ ಬಗ್ಗೆ ನಿಮಗೆಷ್ಟು ಗೊತ್ತು..!
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಅಪ್ರಸ್ತುತ ವಿಚಾರ. ಈಗಾಗಲೇ ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಇಬ್ಬರ ನಡುವೆ ಉತ್ತಮ ಬಾಂಧವ್ಯ ಇದೆ. ಮುಂದುವರೆದು ಮುಖ್ಯಮಂತ್ರಿ ಹುದ್ದೆ ಬಗ್ಗೆ ಚಿಂತನೆ ಮಾಡಬೇಕಾಗಿರುವುದು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವ ಕುರಿತ ಒಪ್ಪಂಧ ಐದು ಜನರ ನಡುವೆ ಮಾತ್ರ ಆಗಿದೆ. ಅಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಮಾತ್ದರ ಈ ವಿಚಾರ ತಿಳಿದಿದೆ. ಬಾರದು ಬಪ್ಪದು, ಬಪ್ಪದು ತಪ್ಪದು ಎಂಬಂತೆ ಎಲ್ಲವೂ ನಡೆಯುತ್ತದೆ. ಸದ್ಯ ಉತ್ತಮ ಆಡಳಿತ ಕೊಡುತ್ತಿದ್ದಾರೆ. ಇನ್ನೂ ಉತ್ತಮ ಆಡಳಿತ ಕೊಡಿ ಎಂದು ಹಾರೈಸುತ್ತೇವೆ ಎಂದರು.
ಇದನ್ನೂ ಓದಿ: ಶೀಘ್ರದಲ್ಲೇ ಕೇಂದ್ರೀಯ ವಿದ್ಯಾಲಯ | ಗೋವಿಂದ ಕಾರಜೋಳ
ಬೆಂಗಳೂರಿನ ಚಂದ್ರಶೇಖರ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದು ಹೈಕಮಾಂಡ್ ಚಿಂತನೆ ಮಾಡಬೇಕಾದ ವಿಚಾರ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಆದ ಸಿದ್ಧಾಂತವಿದೆ. ಕಳೆದ 70 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿಕೊಂಡು ಬಂದಿದೆ. ತತ್ವ ಸಿದ್ಧಾಂತ ಹಾಗೂ ಬದ್ಧತೆ ಇರುವ ಅತ್ಯಂತ ಹಳೆಯ ಪಕ್ಷ. ಅಲ್ಲಿ ಸಾಮಾಜಿಕ ನ್ಯಾಯ ಇದೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಮುಂದೆ ಡಿ.ಕೆ.ಶಿವಕುಮಾರ್ ಆಗಬಹುದು. ದಲಿತ ನಾಯಕರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಂಥವರಿಗೂ ಅವಕಾಶ ಸಿಗಬೇಕು. ಎಲ್ಲವನ್ನೂ ಯೋಚನೆ ಮಾಡಿದಾಗ ಮುಂದೆ ಲಿಂಗಾಯತರು ಮುಖ್ಯಮಂತ್ರಿ ಆಗುವ ಯೋಗ ಬಂದೇ ಬರುತ್ತದೆ ಎಂದು ಹೇಳಿದರು.