ಮುಖ್ಯ ಸುದ್ದಿ
Silk: ಡಿ.20 ರಂದು ಚಿತ್ರದುರ್ಗದಲ್ಲಿ ರೇಷ್ಮೆ ಕೃಷಿ ಮೇಳ
CHITRADURGA NEWS | 13 DECEMBER 2024
ಚಿತ್ರದುರ್ಗ: ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ ವತಿಯಿಂದ ಇದೇ ಡಿ.20ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಎಸ್.ಜಿ ಕಲ್ಯಾಣ ಮಂಟಪದಲ್ಲಿ ರೈಷ್ಮೆ ಕೃಷಿ-ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ “ರೇಷ್ಮೆ ಕೃಷಿ ಮೇಳ”(Sericulture Fair) ಆಯೋಜಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಡಿಸೆಂಬರ್ 12 | ಅಡಿಕೆ ಮಾರುಕಟ್ಟೆಗಳ ವರದಿ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಸಚಿವ ಕೆ.ವೆಂಕಟೇಶ್ ರೇಷ್ಮೆ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜ ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕೆ.ಎಸ್.ಎಸ್ ಐಡಿಸಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಭಾಗವಹಿಸುವರು.
ಕ್ಲಿಕ್ ಮಾಡಿ ಓದಿ: ನೇರ ರೈಲು ಮಾರ್ಗದ ಭೂ ಸ್ವಾಧೀನ ಶೀಘ್ರ ಮುಗಿಸಿ | ಡಿಸಿ ವೆಂಕಟೇಶ್
ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಮತ್ತು ನಿರ್ದೇಶಕ ಎಂ.ಬಿ.ರಾಜೇಶ್ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವರಾಜ್ ಕುಮಾರ್, ತಾಂತ್ರಿಕ ನಿರ್ದೇಶಕ ಡಾ.ಎಸ್.ಮಂತಿರಮೂರ್ತಿ, ಅಮೃತ ಸಾವಯವಗೊಬ್ಬರ ಕಂಪನಿಯ ನಾಗರಾಜ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಸದಸ್ಯರು, ರೇಷ್ಮೆ ಬೆಳೆಗಾರರ ಸಂಘಗಳ ಸದಸ್ಯರು, ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿ, ಮೈಸೂರು ಜಂಟಿ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ರಾಜ್ಯ ರೇಷ್ಮೆ ಇಲಾಖೆಯ ವಿಸ್ತರಾಣಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.