
CHITRADURGA NEWS | 23 AUGUST 2025
ಚಿತ್ರದುರ್ಗ: ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಅನುಮತಿ ನೀಡಲು ತಾಲ್ಲೂಕು ಮಟ್ಟದಲ್ಲಿ ಏಕ ಗವಾಕ್ಷಿ ಸಮಿತಿ ರಚನೆ ಮಾಡಲಾಗಿದೆ.
ಇದನ್ನೂ ಓದಿ: ಗಣೇಶ ಹಬ್ಬ | ಶಾಂತಿ, ಸೌಹಾರ್ದತೆಯಿಂದ ಆಚರಿಸಿ | ಡಿಸಿ ವೆಂಕಟೇಶ್

ತಾಲ್ಲೂಕು ಮಟ್ಟದ ಏಕ ಗವಾಕ್ಷಿ ಸಮಿತಿಯಲ್ಲಿ ಅಧ್ಯಕ್ಷರಾಗಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲೆಯ ಎಲ್ಲ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದು, ಸದಸ್ಯರಾಗಿ ಆರಕ್ಷಕ ಉಪಾಧೀಕ್ಷಕರು, ವೃತ್ತ ನಿರೀಕ್ಷಕರು, ಪರಿಸರ ಅಧಿಕಾರಿ, ಪ್ರಾದೇಶಿಕ ಸಾರಿಗೆ ಅಧಿಕಾರಿ, ನಗರ ಸ್ಥಳೀಯ ಸಂಸ್ಥೆಗಳ ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ.
ತಾಲ್ಲೂಕು ಏಕ ಗವಾಕ್ಷಿ ಸಮಿತಿಯು ಈ ಕೆಳಕಂಡ ಷರತ್ತುಗಳನ್ವಯ ಅನುಮತಿ ನೀಡಲು ಸೂಚಿಸಿಲಾಗಿದೆ.
ಷರತ್ತುಗಳು:
ಗಣಪತಿ ಪ್ರತಿಷ್ಠಾಪನೆ ಅನುಮತಿಯನ್ನು ಕೋರಿಕೆ ಮೇರೆಗೆ ಕಡ್ಡಾಯವಾಗಿ ಏಕ ಗವಾಕ್ಷಿ ಸಮಿತಿಯಲ್ಲಿ ತೀರ್ಮಾನಿಸಿಯೇ ನೀಡಬೇಕು.
ಇದನ್ನೂ ಓದಿ: ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಇ.ಡಿ.ವಶಕ್ಕೆ
ಸಾರ್ವಜನಿಕ ಸ್ಥಳ/ ಸರ್ಕಾರಿ/ ರಸ್ತೆಗಳ ಮೇಲೆ ಹಾಗೂ ಸಂಚಾರಕ್ಕೆ ಆಡಚಣೆಯುಂಟಾಗುವ ಮತ್ತು ಕಾನೂನು ಸುವ್ಯವ್ಯಸ್ಥೆಗೆ ಆಡಚಣೆಯುಂಟಾಗಬಹುದಾದ ಸ್ಥಳಗಳಲ್ಲಿ ಅನುಮತಿ ನೀಡಬಾರದು.
ಆಯೋಜಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್ ಕಡ್ಡಾಯವಾಗಿ ಪಡೆಯುವುದು. ಖಾಸಗಿ ಸ್ಥಳವಾಗಿದ್ದಲ್ಲಿ ಮಾಲೀಕರಿಂದ ಕಡ್ಡಾಯವಾಗಿ ಸಮ್ಮತಿ ಪತ್ರ ಆಯೋಜಕರು ಪಡೆದು ಸಲ್ಲಿಸುವುದು. ಯಾವುದೇ ಕಾರಣಕ್ಕೆ ಡಿ.ಜೆ.ಗೆ ಅನುಮತಿ ನೀಡಬಾರದು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ದಿನಾಂಕ: 20.07.2016ರ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪ್ಲಾಸ್ಟರ್ ಅಪ್ ಪ್ಯಾರಿಸ್ ಮೂರ್ತಿಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳಿಗೆ ವ್ಯಾಪಾರ ಲೈಸನ್ಸ್ ನೀಡದಿರಲು ಮತ್ತು ಲೈಸೆನ್ಸ್ ಪಡೆಯದೇ ಅನಧಿಕೃತವಾಗಿ ತಯಾರಿ, ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವುದು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 23 | ಹತ್ತಿ ರೇಟ್ ಎಷ್ಟಿದೆ?
ಪ್ಲಾಸ್ಟರ್ ಆಪ್ ಪ್ಯಾರಿಸ್, ಬಣ್ಣ ಲೇಪಿತ ಮೂರ್ತಿಗಳನ್ನು ಯಾವುದೇ ನದಿ, ಕಾಲುವೆ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ, ಭಾರತೀಯ ನ್ಯಾಯ ಸಂಹಿತೆ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸುವುದು.
ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ವಿದ್ಯುತ್ ಪರಿವೀಕ್ಷಕರಿಂದ ಅನುಮತಿ ಪಡೆದ ನಂತರವೇ ಬೆಸ್ಕಾಂ ಇಲಾಖೆ ನೀಡತಕ್ಕದ್ದು. ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ರಾಸಾಯನಿಕ ಬಣ್ಣಗಳಿಂದ ಮಾಡಲಾದ ಮೂರ್ತಿಗಳ ಬದಲಾಗಿ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿದ ನಂತರ ಸಾಮೂಹಿಕವಾಗಿ ಗುರುತಿಸಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ವಿಸರ್ಜಿಸುವುದು.
ನೈಸರ್ಗಿಕ, ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಪ್ರತ್ಯೇಕ ವಾಹನದ ವ್ಯವಸ್ಥೆ ಮಾಡಲು ಕ್ರಮವಹಿಸುವುದು.
ಇದನ್ನೂ ಓದಿ: ಒಳಮೀಸಲಾತಿ | ಸ್ಪೃಶ್ಯ ಪದ ತೆಗೆದು ವಿಮುಕ್ತ ಸಮುದಾಯವೆನ್ನಿ | ಇಮ್ಮಡಿ ಶ್ರೀ
ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಿ.ಒ.ಪಿ ಮತ್ತು ಬಣ್ಣದ ಮೂರ್ತಿಗಳನ್ನು ತನಿಖೆ ಮಾಡಿ ಸುಪರ್ಧಿಗೆ ತೆಗೆದುಕೊಳ್ಳಲು ಕ್ರಮವಹಿಸುವುದು. ಸಾರ್ವಜನಿಕವಾಗಿ ಇಡಲಾಗುವ ಗಣೇಶ ಮೂರ್ತಿಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು.
ಈ ಅನುಮತಿ ಪತ್ರಗಳಲ್ಲಿ ಲೈಸನ್ಸ್ ನೀಡುವ ಸಂದರ್ಭಗಳಲ್ಲಿ ಪ್ಲಾಸ್ಟಿಕ್ ಪ್ಲೆಕ್ಸ್ ಮತ್ತಿತರ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು. ನಿರ್ಧಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ಧಿಷ್ಟ ಜಲಮೂಲಗಳನ್ನು ನಿಗಧಿಪಡಿಸುವುದು ಮತ್ತು ಈ ಬಗ್ಗೆ ಸೂಕ್ತ ಪ್ರಕಟಣೆಯನ್ನು ಹೊರಡಿಸುವುದು.
ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‍ಗಳಲ್ಲಿ, ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು. ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಉಪಯೋಗಿಸಲಾಗುವ ವಾಹನಗಳಿಗೆ ಕಡ್ಡಾಯವಾಗಿ ದಾಖಲೆ ಸಲ್ಲಿಸಿ, ಅನುಮತಿ ಪಡೆದುಕೊಳ್ಳುವುದು.
ಇದನ್ನೂ ಓದಿ: ನಾಗಪುರ ದೀಕ್ಷಾ ಭೂಮಿ ಯಾತ್ರೆ | ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ತಾಲ್ಲೂಕು ಸಮಿತಿ ಅಧ್ಯಕ್ಷರು ಹಾಗೂ ತಹಶೀಲ್ದಾರರು ಕೂಡಲೇ ತಾಲ್ಲೂಕು ಮಟ್ಟದ ಸಮಿತಿ ಸಭೆ ಕರೆದು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
