
CHITRADURGA NEWS | 08 JULY 2026
ಚಿತ್ರದುರ್ಗ: ರಾಜ್ಯದಲ್ಲಿ ಎಸ್.ಐ.ಆರ್ ರನ್ನು ಕೇಂದ್ರ ಸರ್ಕಾರ ನಡೆಸುತ್ತಿಲ್ಲ, ನಡೆಸುತ್ತಿರುವುದು ಚುನಾವಣಾ ಆಯೋಗ. ಆದರೆ ಇದನ್ನು ತಿಳಿಯದ ಕಾಂಗ್ರೆಸ್ ಸರ್ಕಾರ ವಿನಾಕಾರಣ ವಿರೋಧ ಮಾಡುತ್ತಿದೆ. ಜನತೆಯನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ರಾಜ್ಯ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
ಬಿಜೆಪಿ ಜಿಲ್ಲೆ ಘಟಕದ ವತಿಯಿಂದ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿ.ಜಿ. ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವ ಸಿದ್ದತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು.
ಕಾಂಗ್ರೆಸ್ ಅಧಿಕಾರ ದುರ್ಬಳಕೆ ರಾಜ್ಯದಲ್ಲಿ ಮತಪರಿಷ್ಕರಣೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ವ್ಯವಸ್ಥೆಯನ್ನು ಬುಡಮೇಲು ಮಾಡಲು ಕೈ ಹಾಕಿದೆ. ಅಧಿಕಾರಿಗಳ ದುರ್ಬಳಕೆ, ಮಸೀದಿಗಳಲ್ಲಿ ಎಸ್‍ಐಅರ್ ನಡೆಯುತ್ತಿದೆ. ತಪ್ಪು ಮುಚ್ಚಲು ಆಯೋಗ ದೂರುವುದು ಸರಿಯಲ್ಲ. ಮಾನ ಮಾರ್ಯಾದೆ ಇದ್ರೆ ಚುನಾವಣಾ ಆಯೋಗಕ್ಕೆ ಸಹಕಾರ ನೀಡಲಿ ಎಂದರು.
20 ವರ್ಷಗಳ ನಂತರ ಇದು ನಡೆಯುತ್ತಿದೆ, ಇದಕ್ಕೆ ಎಲ್ಲರು ಸಹಾ ಸಹಕಾರ ನೀಡಬೇಕು. ನಮ್ಮ ಪಕ್ಷದ ಬಿಎಲ್‍ಎಗಳು ಇದರ ಬಗ್ಗೆ ಗಮನ ನೀಡಿ ಮತದಾರರಿಗೆ ಸಹಕಾರವನ್ನು ನೀಡಿ. ಯಾವ ಮತದಾರರು ಸಹಾ ಮತದಾನದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ದೇಶದಲ್ಲಿ ಮತದಾರರ ಮತ ಪಟ್ಟಿ ಪರಿಷ್ಕರಣೆ ನಡೆಯುವಂತೆ ರಾಜ್ಯದಲ್ಲೂ ನಡೆಯುತ್ತಿದೆ ಎಂದರು.
ಇದನ್ನೂ ಓದಿ: ಜಿಲ್ಲೆಯಲ್ಲಿ ಕಡಿಮೆ ಮಳೆ | ಬರ ಪರಿಸ್ಥಿತಿ ಎದುರಿಸಲು ಸೂಕ್ತ ಬೆಳೆ, ತಳಿ ಆಯ್ಕೆ ಮಾಡಿ | ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹಾಗೂ ಕಾಂಗ್ರೆಸ್‍ಗೆ ತಾಕತ್ತಿದ್ದರೆ, ಸೋನಿಯಾ, ರಾಹುಲ್ ಅವರ ರಾಜೀನಾಮೆ ಮೊದಲು ಪಡೆಯಬೇಕು, ನ್ಯಾಷನಲ್ ಹೆರಾಲ್ಡ್‍ನ ಕೋಟ್ಯಾಂತರ ರೂಪಾಯಿ ಲೂಟಿ ಹೊಡೆದಿದ್ದಾರೆ. ಅದು ಬಿಟ್ಟು ಮೋದಿ ಅವರ ರಾಜೀನಾಮೆ ಕೇಳುತ್ತಿದ್ದಾರೆ.
ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರದ ಬಗ್ಗೆ ನೈತಿಕತೆ ಇದ್ದರೆ ಮೊದಲು ರಾಹುಲ್ ಗಾಂಧಿ ರಾಜೀನಾಮೆ ಪಡೆಯಿರಿ, ಕಾಂಗ್ರೆಸ್ ನವರು ಶ್ರೀರಾಮ ಟ್ರಸ್ಟ್ ನಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಆದರೆ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣವನ್ನು ಯಾಕೆ ಸಿಬಿಐಗೆ ಕೊಡಲಿಲ್ಲ. ಈಗ ಸಿಬಿಐ ನೆನಪಾಗಿದೆ. ಈಗಾಗಲೇ ಯೋಗಿ ಅದಿತ್ಯನಾಥ್ ಅವರು ತಡ ಮಾಡದೆ ಎಸ್‍ಐಟಿ ರಚಿಸಿ ತನಿಖೆ ಆರಂಭಿಸಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಮೂರು ವರ್ಷಗಳಿಂದ ಹಿಂದುಗಳ ಮೇಲೆ ಅತ್ಯಾಚಾರ ಮತ್ತು ದೌರ್ಜನ್ಯ ನಡೆಯುತ್ತಿದೆ. ಅಂತವರಿಗೆ ಜೈಲಿಗೆ ಹಾಕಿ ಬಿರಿಯಾನಿ ತಿನ್ನಿಸೋದು ಬಿಟ್ಟು, ಅವರನ್ನು ಶಾಶ್ವತವಾಗಿ ಜೈಲಿಗಟ್ಟುವ ತಾಕತ್ತಿದಿಯಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ನೈಸರ್ಗಿಕ, ಸಾವಯವ ಕೃಷಿ ಕುರಿತು ತರಬೇತಿ | ಉಚಿತ ವಸತಿ
ಹಿಂದೂಗಳು ಮೇಲೆ ದೌರ್ಜನ್ಯ ಎಸಗುತ್ತಿರುವವರ ಹೆಡೆಮುರಿ ಕಟ್ಟುವ ಕೆಲಸ ಮಾಡುತ್ತಿಲ್ಲ, ಬಿಜೆಪಿ ಅಲ್ಪ ಸಂಖ್ಯಾತರ ವಿರೋಧಿಯಲ್ಲ, ಆದರೆ ಪಾಕಿಸ್ತಾನ್ ಜಿಂದಾಬಾದ್ ಎನ್ನುವವರನ್ನು ನೋಡಿ ಸುಮ್ಮನೆ ಕೂರಲ್ಲ. ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನ ಪಾಠ ಕಲಿಸಬೇಕಿದೆ. ರಾಜ್ಯದಲ್ಲಿ ಬೊಗಳೆ ಹೊಡ್ಕೊಂಡು ಗ್ಯಾರಂಟಿಗಳ ನೆಪದಲ್ಲಿ ರಾಜ್ಯವನ್ನು ಅರಾಜಕತೆಗೆ ತೆಗೆದುಕೊಂಡು ಹೋಗುತ್ತಿದ್ದಾರೆ.
ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಮೆರೆಯುತ್ತಿರುವ ಕಾಂಗ್ರೆಸ್ ಜೋರಾಗಿ ಉರಿಯುತ್ತಿರುವ ದೀಪದಂತ ಪರಿಸ್ಥಿತಿಯಲ್ಲಿದೆ. ಕಾಂಗ್ರೆಸ್ ಆಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‍ನ್ನು ಶಾಶ್ವತವಾಗಿ ಮನೆಯಲ್ಲಿ ಕೂರಿಸುತ್ತಾರೆ ಎಂದು ಭವಿಷ್ಯ ನುಡಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮಹತ್ತರ ಜವಾಬ್ದಾರಿ ರಾಜ್ಯ ಸರ್ಕಾರಕ್ಕಿದೆ. ಆದರೆ ಕಳೆದ ಮೂರು ವರ್ಷಗಳಿಂದ ನೆರೆ ಬಂದಾಗಲೂ ರೈತರ ಸಹಾಯಕ್ಕೆ ಕಾಂಗ್ರೆಸ್ ಸರ್ಕಾರ ಬರಲಿಲ್ಲ. ಬರ ಬಂದಾಗಲೂ ಕಾಂಗ್ರೆಸ್ ಸರ್ಕಾರ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರವನ್ನು ದೂರುವುದು ಬಿಟ್ಟರೆ ಏನು ಮಾಡುತ್ತಿಲ್ಲ. ಕೇವಲ ಮೊಸಳೆ ಕಣ್ಣೀರು ಹಾಕುತ್ತಾರೋ ಅಥವ ಸಹಾಯ ಮಾಡುತ್ತಾರೋ ಬರುವ ದಿನಗಳಲ್ಲಿ ನೋಡುತ್ತೇವೆ. ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಹರಳಯ್ಯ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿದವರ ಬಂಧನ
ಸಭೆಯಲ್ಲಿ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಶಿವಯೋಗಿ ಸ್ವಾಮಿ, ಬಿಜೆಪಿ ಜಿಲ್ಲಾ ಆಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಮುಖಂಡರುಗಳಾದ ಎನ್.ಆರ್.ಲಕ್ಷ್ಮೀಕಾಂತ, ರಾಜಣ್ಣ, ಅನಿಲ್ ವಿಭಾಗ ಸಹಾ ಪ್ರಭಾರಿ ಎ.ಮುರಳಿ, ಆಗ್ನೇಯ ಚುನಾವಣಾ ಸಹಾ ಪ್ರಭಾರಿ ರಘುಚಂದನ್, ಉಪಾಧ್ಯಕ್ಷರಾದ ಡಾ.ಸಿದ್ಧಾರ್ಥ, ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದ, ಮಾಧುರಿ ಗೀರೀಶ್, ಮೋಹನ್ ಕುಮಾರ್, ಕೇಶವ ಪ್ರಸಾದ್, ಕಾಡುಗೊಲ್ಲ ಸಂಘದ ರಾಜ್ಯಧ್ಯಕ್ಷರಾದ ರಾಜಣ್ಣ, ರಾಮದಾಸ್, ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಟಿ.ಜಿ.ನರೇಂದ್ರನಾಥ್, ಪಕ್ಷದ ಅಗ್ನೇಯ ಪದವೀಧರ ಕ್ಷೇತ್ರ ಅಭ್ಯರ್ಥಿ ಕೆ.ಎಂ.ಸುರೇಶ್ ಸೇರಿದಂತೆ ಭಾರತೀಯ ಜನತಾ ಪಾರ್ಟಿಯ ಹಾಲಿ ಮತ್ತು ಮಾಜಿ ಚುನಾಯಿತ ಜನಪ್ರತಿನಿದಿಗಳು, ಜಿಲ್ಲೆಯ ಎಲ್ಲಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾ ಅಧ್ಯಕ್ಷರು ಸೇರಿದಂತೆ ಸರ್ವ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

