CHITRADURGA NEWS | 10 JULY 2026
ಚಿತ್ರದುರ್ಗ: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಅಂಗವಾಗಿ ಬಿರುಸಿನಿಂದ ಮನೆ-ಮನೆ ಸಮೀಕ್ಷೆ ನಡೆಯುತ್ತಿದ್ದು, ಜುಲೈ 10ರವರೆಗೆ ಒಟ್ಟು 2,68,570 ಗಣತಿ ನಮೂನೆಗಳನ್ನು ವಿತರಿಸಲಾಗಿದೆ.
ಇದನ್ನೂ ಓದಿ: ಏಕಲವ್ಯ ವಸತಿ ಶಾಲೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30ರಿಂದಲೇ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 288 ಮತಗಟ್ಟೆಗಳಿದ್ದು, ಒಟ್ಟು 2,69,332 ಮತದಾರರಿದ್ದಾರೆ. ಈ ಪೈಕಿ ಸದ್ಯ ವಿತರಿಸಲಾಗಿರುವ ಗಣತಿ ನಮೂನೆಗಳಲ್ಲಿ 72,303 ಗಣತಿ ನಮೂನೆಗಳನ್ನು ಈಗಾಗಲೇ ಗಣಕೀಕರಣ ಮಾಡಲಾಗಿದೆ.
ಈ ಮನೆ-ಮನೆ ಪರಿಶೀಲನಾ ಕಾರ್ಯದಲ್ಲಿ ಜುಲೈ 10ರವರೆಗೆ ಲಭ್ಯವಾಗಿರುವ ಮಾಹಿತಿಯ ಅನ್ವಯ, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಶಾಶ್ವತವಾಗಿ ವಲಸೆ ಹೋಗಿರುವ 173 ಜನರನ್ನು ಪತ್ತೆ ಹಚ್ಚಲಾಗಿದೆ. ಉಳಿದಂತೆ ಮರಣ ಹೊಂದಿರುವ 236 ಮತದಾರರು, ಎರಡು ಕಡೆ ಹೆಸರು ದಾಖಲಾಗಿರುವ (ಡಬಲ್ ಎಂಟ್ರಿ) 53 ಪ್ರಕರಣಗಳು ಹಾಗೂ ಗೈರುಹಾಜರಾಗಿರುವ 9 ಜನರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
ಮನೆ-ಮನೆ ಭೇಟಿಯ ಈ ಪ್ರಕ್ರಿಯೆಯು ಜುಲೈ 29ರವರೆಗೆ ನಡೆಯಲಿದೆ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

