
CHITRADURGA NEWS | 05 DECEMBER 2025
ಚಿತ್ರದುರ್ಗ: ದಾವಣಗೆರೆ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಸಾಲಿನ ಅಂತಿಮ ವರ್ಷದ ಬಿ.ಎ./ಬಿ.ಕಾಂ. ಪರೀಕ್ಷೆಗಳಲ್ಲಿ ನಗರದ ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕಲಾ ವಿಭಾಗದಲ್ಲಿ ಎಸ್.ಸಲ್ಮಾ ಸಮಾಜಶಾಸ್ತ್ರ, ಕನ್ನಡ ಐಚ್ಛಿಕ ವಿಷಯಗಳಲ್ಲಿ ವಿದ್ಯಾಭ್ಯಾಸ ಮಾಡಿ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದಿರುತ್ತಾರೆಂದು ಕಾಲೇಜಿನ ಪ್ರಾಚಾರ್ಯ ಡಾ.ಎಲ್. ಈಶ್ವರಪ್ಪ ತಿಳಿಸಿದರು.
ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | OPS ಕುರಿತ ವರದಿ ಸಿದ್ಧ | ಮಾಲತೇಶ್ ಮದ್ದಜ್ಜಿ
ಕಲಾ ವಿಭಾಗದಲ್ಲಿ ಎನ್.ಕೀರ್ತಿ 93% ಅಂಕ, ವಾಣಿಜ್ಯ ವಿಭಾಗದಲ್ಲಿ ಎಸ್. ಎನ್.ತೇಜಸ್ವಿನಿ 94.42% , ಉಜ್ಮಾ ಪರ್ವಿನ್ 88.42% ಅಂಕ ಪಡೆದು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಾಲೇಜಿನ ಒಟ್ಟು ಫಲಿತಾಂಶ ಬಿ.ಎ. ಪದವಿ 98% ಹಾಗೂ ಬಿ.ಕಾಂ. 100% ಫಲಿತಾಂಶ ಬಂದಿರುತ್ತದೆ.
ಇದನ್ನೂ ಓದಿ: ರೈತರು ಬೆಳೆದ ಮೆಕ್ಕೆಜೋಳ ಏನು ಮಾಡಬೇಕು MLC ರವಿಕುಮಾರ್ ಸರ್ಕಾರಕ್ಕೆ ಪ್ರಶ್ನೆ
ಅತಿ ಹೆಚ್ಚು ಅಂಕ ಪಡೆದು ಕಾಲೇಜಿಗೆ 3ನೇ ರ‍್ಯಾಂಕ್ ಹಾಗೂ ಪ್ರಥಮ, ದ್ವಿತೀಯ ಸ್ಥಾನ ಗಳಿಸಿರುವ ವಿದ್ಯಾರ್ಥಿಗಳಿಗೆ ಎಸ್.ಜೆ.ಎಂ. ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
