CHITRADURGA NEWS | 07 AUGUST 2026
ಚಿತ್ರದುರ್ಗ: ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಎಸ್‌ಜೆಎಂ ಫಾರ್ಮಸಿ ಕಾಲೇಜು ವತಿಯಿಂದ ಆಯೋಜಿಸಿದ್ದ ಫಾರ್ಮಾ ದೀಕ್ಷಾಂತ್–2026 ಪದವಿ ಪ್ರದಾನ ಸಮಾರಂಭದಲ್ಲಿ ಬಿ.ಫಾರ್ಮ್, ಫಾರ್ಮ್-ಡಿ ಹಾಗೂ ಎಂ.ಫಾರ್ಮ್ ವಿಭಾಗಗಳ 146 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ: ಹೊಸದುರ್ಗ | ರೈತರ ಜಮೀನುಗಳಿಗೆ ಸಚಿವ ಟಿ.ರಘುಮೂರ್ತಿ ಭೇಟಿ, ಪರಿಶೀಲನೆ
ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್‌ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಡಾ.ಬಸವಕುಮಾರ್ ಸ್ವಾಮೀಜಿ ಮಾತನಾಡಿ, ಪದವಿ ಪಡೆಯುವುದು ಶಿಕ್ಷಣದ ಅಂತ್ಯವಲ್ಲ, ಸಮಾಜದತ್ತ ಜವಾಬ್ದಾರಿಯುತ ಬದುಕಿನ ಆರಂಭವಾಗಿದೆ ಎಂದು ಹೇಳಿದರು.
1964ರಲ್ಲಿ ಹಿರಿಯ ಜಗದ್ಗುರು ಮಲ್ಲಿಕಾರ್ಜುನ ಮಹಾಸ್ವಾಮೀಜಿ ಎಸ್‌ಜೆಎಂ ವಿದ್ಯಾಪೀಠವನ್ನು ಸ್ಥಾಪಿಸುವ ಮೂಲಕ ಮಧ್ಯ ಕರ್ನಾಟಕದಲ್ಲಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿದರು. ಅವರ ದೂರದೃಷ್ಟಿಯ ಫಲವಾಗಿ ಇಂದು ಎಸ್‌ಜೆಎಂ ವಿದ್ಯಾಪೀಠ ವಿಶ್ವವಿದ್ಯಾಲಯವಾಗಿ ಬೆಳೆದು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದೆ ಎಂದು ಅವರು ತಿಳಿಸಿದರು.
ವಿಶ್ವವಿದ್ಯಾಲಯದಲ್ಲಿ ಆಧುನಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಪೇಪರ್‌ಲೆಸ್ ಪರೀಕ್ಷಾ ವ್ಯವಸ್ಥೆ, ಡಿಜಿಟಲ್ ಮೌಲ್ಯಮಾಪನ, ವೈ-ಫೈ ಕ್ಯಾಂಪಸ್ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ವ್ಯವಸ್ಥೆ ಜಾರಿಗೆ ತರುವ ಯೋಜನೆ ರೂಪಿಸಲಾಗಿದೆ. ಜ್ಞಾನ, ಕೌಶಲ್ಯ ಮತ್ತು ಮಾನವೀಯ ಮೌಲ್ಯಗಳನ್ನು ಸಮನ್ವಯಗೊಳಿಸುವ ಶಿಕ್ಷಣಕ್ಕೆ ವಿಶ್ವವಿದ್ಯಾಲಯ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ
ಜ್ಞಾನ, ಕೌಶಲ್ಯ ಮತ್ತು ಚಾರಿತ್ರ್ಯ ಬೆಳೆಸಿಕೊಳ್ಳಿ
ಮುಖ್ಯ ಅತಿಥಿಯಾಗಿದ್ದ ಹೈದರಾಬಾದ್‌ನ ವಿಶ್ವೋತ್ತಮ್ ನಾಗರಾಜ್ ಕಂಡಿಕೆರೆ ಮಾತನಾಡಿ, ಯಶಸ್ವಿ ಫಾರ್ಮಸಿ ವೃತ್ತಿಜೀವನಕ್ಕೆ ಮೂರು ಅಂಶಗಳು ಅತ್ಯಗತ್ಯ—ಜ್ಞಾನ, ಕೌಶಲ್ಯ ಮತ್ತು ಚಾರಿತ್ರ್ಯ ಎಂದು ಹೇಳಿದರು.
ಪದವಿ ಪಡೆದ ನಂತರವೂ ನಿರಂತರವಾಗಿ ಹೊಸ ಜ್ಞಾನ ಸಂಪಾದಿಸಬೇಕು. ಸಂಶೋಧನೆ, ವೈದ್ಯಕೀಯ ಸಾಕ್ಷ್ಯಾಧಾರ, ನಿಯಂತ್ರಣ ವಿಜ್ಞಾನ ಹಾಗೂ ಡೇಟಾ ವಿಶ್ಲೇಷಣೆಯ ಅರಿವು ಬೆಳೆಸಿಕೊಳ್ಳಬೇಕು. ಜೊತೆಗೆ ಸಂವಹನ, ಡಿಜಿಟಲ್ ಸಾಮರ್ಥ್ಯ, ನಾಯಕತ್ವ, ಸಮಸ್ಯೆ ಪರಿಹಾರ ಹಾಗೂ ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಅತ್ಯಂತ ಮುಖ್ಯ. ಜ್ಞಾನ ಮತ್ತು ಕೌಶಲ್ಯಕ್ಕಿಂತಲೂ ನೈತಿಕ ಮೌಲ್ಯಗಳನ್ನು ಕಾಪಾಡಿಕೊಂಡಾಗ ಮಾತ್ರ ಸಮಾಜದ ವಿಶ್ವಾಸ ಗಳಿಸಲು ಸಾಧ್ಯ ಎಂದು ಅವರು ಹೇಳಿದರು.
ಸಣ್ಣ ವಿಶ್ವವಿದ್ಯಾಲಯಗಳಿಗೂ ಹೆಚ್ಚಿನ ಅವಕಾಶ
ಡಾ. ಕೆ.ಬಿ. ಗುಡಸಿ ಮಾತನಾಡಿ, ಸಣ್ಣ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ತರಬೇತಿ ಮತ್ತು ಬೋಧನೆಯನ್ನು ರೂಪಿಸುವ ಅವಕಾಶ ಹೊಂದಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) ಕೂಡ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಅಭಿನಂದನೆ
ಕಾರ್ಯಕ್ರಮದಲ್ಲಿ ಎಸ್‌ಜೆಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಮಾರುತಿ ಟಿ. ಏಕಬೋಟೆ ಸ್ವಾಗತಿಸಿ, ಪದವಿ ಪಡೆದ ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜ, ಪೋಷಕರು ಹಾಗೂ ಕಾಲೇಜಿಗೆ ಕೀರ್ತಿ ತಂದುಕೊಡಲಿ ಎಂದು ಹಾರೈಸಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಂ.ಎಸ್. ಗಣಾಚಾರಿ, ಔಷಧ ನಿಯಂತ್ರಣ ಇಲಾಖೆಯ ಎಡಿಸಿ ಗಿರೀಶ್ ಸಿ.ಎಚ್. ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ತಾಡಶಾ ಪಾಂಡ ಕಾರ್ಯಕ್ರಮ ನಿರೂಪಣೆ ಮಾಡಿದರು. ಸಹಾಯಕ ಪ್ರಾಧ್ಯಾಪಕಿ ತೇಜಸ್ವಿನಿ ವಂದನಾರ್ಪಣೆ ಸಲ್ಲಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

