CHITRADURGA NEWS | 18 APRIL 2025
ಚಿತ್ರದುರ್ಗ: ನಗರದ ಜೆಎಂಐಟಿ ಬಳಿ ವಿದ್ಯಾರ್ಥಿಗಳು ಹೆದ್ದಾರಿ ಇಕ್ಕೆಲಗಳ ಮೆಶ್ ಅನ್ನು ಡ್ಯಾಮೇಜ್ ಮಾಡಿ, ಆ ಮೂಲಕ ರಸ್ತೆ ದಾಟಿ ಓಡಾಡುತ್ತಿದ್ದಾರೆ. ಹಲವು ಬಾರಿ ಇಲ್ಲಿ ಅಪಘಾತಗಳಾಗುತ್ತಿವೆ. ಹಾಗಾಗಿ ಇಲ್ಲಿ ಸ್ಕೈವಾಕ್ ಅಗತ್ಯವಿದ್ದು, ಸ್ಕೈವಾಕ್‍ಗೆ ಅನುಮತಿ ನೀಡಬೇಕು ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಸಭೆಗೆ ಮಾಹಿತಿ ನೀಡಿದರು.
Also Read: ಹಸಿ ಹಾಲಿನೊಂದಿಗೆ ಇದನ್ನು ಬೆರೆಸಿ ಹಚ್ಚುವುದರಿಂದ ಚರ್ಮಕ್ಕೆ ಪ್ರಯೋಜನಕಾರಿ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜೆಎಂಐಟಿ ಬಳಿ ಸ್ಕೈವಾಕ್ ಅಗತ್ಯವಿದ್ದು, ಈ ತಿಂಗಳಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಪ್ರಾರಂಭ ಮಾಡಬೇಕು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಳಗೋಟೆಯ ರಾಷ್ಟ್ರೀಯ ಹೆದ್ದಾರಿ ಬಳಿ ವೇಗ ಕಡಿತಗೊಳಿಸಲು ರಂಬಲ್ ಸ್ಟ್ರಿಪ್ಸ್, ಬ್ಲಿಂಕರ್ಸ್, ಲೈಟಿಂಗ್ ವ್ಯವಸ್ಥೆ ಮಾಡಬೇಕು.
Also Read: ನರಗಳನ್ನು ಬಲಪಡಿಸಲು ಈ 3 ಜೀವಸತ್ವಗಳು ಅವಶ್ಯಕ
ಗಾಂಧಿ ವೃತ್ತದಿಂದ ಕೆಎಸ್‍ಆರ್‍ಟಿಸಿ ಮಾರ್ಗದ ರಸ್ತೆಯಲ್ಲಿ ಡಿವೈಡರ್ ತೆರವುಗೊಳಿಸಿದ ಬಳಿಕ ರಸ್ತೆಯನ್ನು ಸರಿಯಾದ ರೀತಿಯಲ್ಲಿ ದುರಸ್ತಿ ಮಾಡಿಲ್ಲ, ಕಬ್ಬಿಣದ ಸರಳುಗಳು ರಸ್ತೆಯ ಮೇಲೆಯೇ ಕಾಣುತ್ತಿದ್ದು, ಅಪಾಯಕಾರಿಯಾಗಿವೆ, ರಸ್ತೆ ಒಂದು ಕಡೆ ಎತ್ತರ, ಇನ್ನೊಂದೆಡೆ ತಗ್ಗಾಗಿದ್ದು, ವಾಹನ ಚಾಲನೆಗೆ ತೊಂದರೆಯಾಗಿ ಅಪಘಾತವಾಗುವ ಸಂಭವವಿದೆ.
ಕೂಡಲೆ ನಗರದಲ್ಲಿ ಎಲ್ಲೆಲ್ಲಿ ಡಿವೈಡರ್‍ಗಳನ್ನು ತೆರವುಗೊಳಿಸಲಾಗಿದೆಯೇ ಅಲ್ಲಿ, ರಸ್ತೆ ಹಾಗೂ ಡಿವೈಡರ್ ಸರಿಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
