
CHITRADURGA NEWS | 09 FEBRUARY 2026
ಚಿತ್ರದುರ್ಗ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನು ಆಚರಿಸಲಾಯಿತು.
ಇದನ್ನೂ ಓದಿ: ರೈತ ಸಂಘದಿಂದ ನಾಳೆ ನಾಲ್ಕು ತಾಲೂಕು ಬಂದ್ ಕರೆ | ಭದ್ರಾ ಮೇಲ್ದಂಡೆ ಯೋಜನೆ ತ್ವರಿತಕ್ಕೆ ಆಗ್ರಹ

ಜೀತ ಪದ್ಧತಿ (ನಿರ್ಮೂಲನೆ) ಕಾಯಿದೆ 1976 ಜಾರಿಗೆ ಬಂದು 50 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷದ ಆಚರಣೆಯು ವಿಶೇಷ ಮಹತ್ವ ಪಡೆದುಕೊಂಡಿದೆ. ಕಾಯ್ದೆಯ ಆಶಯಗಳನ್ನು ಎತ್ತಿ ಹಿಡಿಯುವ ಮತ್ತು ಸಮಾಜದಲ್ಲಿ ಜೀತ ಪದ್ಧತಿಯಂತಹ ಅನಿಷ್ಟಗಳನ್ನು ತೊಲಗಿಸುವ ನಿಟ್ಟಿನಲ್ಲಿ ಎಲ್ಲರಲ್ಲಿಯೂ ಜಾಗೃತಿ ಮೂಡಿಸುವಂತೆ ಡಾ. ರೇಣುಪ್ರಸಾದ್ ಈ ಸಂದರ್ಭದಲ್ಲಿ ಹೇಳಿದರು.
ಸಹಾಯಕ ಆಡಳಿತ ಅಧಿಕಾರಿ ಅನುಸೂಯಮ್ಮ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಪ್ರತಿಜ್ಞೆ ಸಿಬ್ಬಂದಿಗೆ ಬೋಧಿಸಿದರು.
ಇದನ್ನೂ ಓದಿ: ಗ್ರಾಮ ಪಂಚಾಯತಿ ಕೊನೆಯ ಸಾಮಾನ್ಯ ಸಭೆ | ಕಾಲುವೇಹಳ್ಳಿ ಗ್ರಾ.ಪಂ ಅಧ್ಯಕ್ಷೆ ದ್ರಾಕ್ಷಾಯಿಣಿ ಭಾಷಣ
ಈ ವೇಳೆ ಕಚೇರಿ ಅಧಿಕ್ಷಕ ಗವಿಸಿದ್ದೇಶ್, ಇಸ್ಮೈಲ್, ಅಣ್ಣಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ್ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಾನಕಿ, ಪ್ರಥಮ ದರ್ಜೆ ಸಹಾಯಕರಾದ ತಿಪ್ಪೇಸ್ವಾಮಿ, ಬಾಬು, ರಾಜೇಶ್ವರಿ, ಲಕ್ಷ್ಮಿ, ಪುನೀತ್, ಜಿಲ್ಲಾ ಮೇಲ್ವಿಚಾರಕರಾದ ಸುರೇಶ್ ಬಾಬು, ಮಲ್ಲಿಕಾರ್ಜುನ್, ಗಂಗಾಧರ್, ಜಬ್ಬಾರ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
