CHITRADURGA NEWS | 10 OCTOBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ಕಾರ್ಯವು ಕಳೆದ ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 1,32,083 ಮನೆಗಳಿದ್ದು, ಈವರೆಗೆ 1,04,442 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿರುತ್ತದೆ. ಸಮೀಕ್ಷೆ ಕಾರ್ಯವನ್ನು ಇದೇ ಅಕ್ಟೋಬರ್ 18 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಜಿಲ್ಲೆಯಲ್ಲಿ ಮಳೆಗೆ 13 ಮನೆ ಹಾನಿ | ಮಳೆಯ ವಿವರ ಇಲ್ಲಿದೆ….
ನಾಗರೀಕರು ಇದುವರೆಗೂ ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ಸಂಬಂಧಪಟ್ಟ ತಾಲ್ಲೂಕು ಕಚೇರಿಗೆ ಮಾಹಿತಿ ನೀಡಬಹುದಾಗಿದೆ ಅಥವಾ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಮೊಳಕಾಲ್ಮುರು ತಾಲ್ಲೂಕು-9743085676, ಚಳ್ಳಕೆರೆ-080195-200130, 9972997738, ಚಿತ್ರದುರ್ಗ-08194-235034, ಹಿರಿಯೂರು-6362474421, ಹೊಸದುರ್ಗ-9972385061, ಹೊಳಲ್ಕೆರೆ-08191-200021 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಇದನ್ನೂ ಓದಿ: ಈರುಳ್ಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು | ಈರುಳ್ಳಿ ಸುರಿದು ಪ್ರತಿಭಟನೆ
ಸಾರ್ವಜನಿಕರು ತಮ್ಮ ಮನೆಯ ಸಮೀಕ್ಷೆ ಕಾರ್ಯವಾಗದಿದ್ದಲ್ಲಿ ನೇರವಾಗಿ https://kscbcselfdeclaration.karnataka.gov.in ವೆಬ್‍ಸೈಟ್‍ನಲ್ಲಿ ತಮ್ಮ ಮನೆಯ ಸಮೀಕ್ಷೆ ಕಾರ್ಯವನ್ನು ಮಾಡಬಹುದಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಪ್ರಕಟಣೆಯಲ್ಲ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
