Connect with us

D.Sudhakar; ಸಮಾಜ ಸೇವೆ ಈಡಿಗರ ರಕ್ತದಲ್ಲೇ ಇದೆ | ಸಚಿವ‌ ಡಿ.ಸುಧಾಕರ್

ಈಡಿಗರ ಸಂಘದ ರಜತ ಮಹೋತ್ಸವ ಕಾರ್ಯಕ್ರಮವನ್ನು ಸಚಿವ ಡಿ. ಸುಧಾಕರ್ ಉದ್ಘಾಟಿಸಿದರು.

ಮುಖ್ಯ ಸುದ್ದಿ

D.Sudhakar; ಸಮಾಜ ಸೇವೆ ಈಡಿಗರ ರಕ್ತದಲ್ಲೇ ಇದೆ | ಸಚಿವ‌ ಡಿ.ಸುಧಾಕರ್

CHITRADURGA NEWS | 20 OCTOBER 2024

ಚಿತ್ರದುರ್ಗ: ಈಡಿಗರ ಜನಾಂಗದ ರಕ್ತದಲ್ಲಿಯೇ ಸಮಾಜಕ್ಕೆ ಸೇವೆ ಮಾಡುವ ಶಕ್ತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್(D. Sudhakar) ಹೇಳಿದರು.

ಕ್ಲಿಕ್ ಮಾಡಿ ಓದಿ: Government; ಸರ್ಕಾರ ಬದಲಾದರೆ ಸಚಿವ ಸ್ಥಾನ‌ ನೋಡೋಣ | ಬಿ.ಜಿ.ಗೋವಿಂದಪ್ಪ

ನಗರದ ತ.ರಾ.ಸು.ರಂಗಮಂದಿರದಲ್ಲಿ ಭಾನುವಾರ ನಡೆದ ಜಿಲ್ಲಾ ಆರ್ಯ ಈಡಿಗರ ಸಂಘದ ರಜತ ಮಹೋತ್ಸವ, ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ಜನಾಂಗದ ಬಡ ಮಹಿಳೆಯರ ಸ್ವಾವಲಂಬನೆಗೆ ಸಹಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದಿಂದ ಮಾತ್ರ ಉದ್ದಾರವಾಗಲು ಸಾಧ್ಯ. ಅದಕ್ಕಾಗಿ ಮೊದಲು ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ. ಸಂಘಟಿತರಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಈಡಿಗ ಸಮುದಾಯಕ್ಕೆ ಕರೆ ನೀಡಿದರು.

ಈಡಿಗರ ಜನಾಂಗದ ಮಕ್ಕಳ ಶಿಕ್ಷಣಕ್ಕೆ ಚಿತ್ರದುರ್ಗದಲ್ಲಿ ಹಾಸ್ಟೆಲ್, ಸಮುದಾಯ ಭವನ ನಿರ್ಮಾಣಕ್ಕೆ ಐದು ಎಕರೆ ಜಮೀನು ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಜೀವನ್ ಮನವಿ ಸಲ್ಲಿಸಿದರು,

ಕ್ಲಿಕ್ ಮಾಡಿ ಓದಿ: BG Govindappa; ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಜನ್ಮದಿನಾಚರಣೆ | ಪತ್ನಿಯೊಂದಿಗೆ ನಾಯಕನಹಟ್ಟಿಗೆ ಭೇಟಿ

ಇದಕ್ಕೆ ಸ್ವಂದಿಸಿದ ಸಚಿವರು, ಚಿತ್ರದುರ್ಗದಲ್ಲಿ ಹಾಸ್ಟೆಲ್, ಸಮುದಾಯ ಭವನ ನಿರ್ಮಾಣಕ್ಕೆ ಬೇಡಿಕೆಯಿಟ್ಟಿದ್ದೀರ. ನಾನು ಮಂತ್ರಿಯಾಗಿ ಒಂದು ವರ್ಷ ನಾಲ್ಕು ತಿಂಗಳಾಗಿದೆ. ನಗರದಲ್ಲಿ ಜಾಗ ಗುರುತಿಸಿ ಐದು ಎಕರೆ ಭೂಮಿ ಮಂಜೂರು ಮಾಡಿ ಅದಕ್ಕೆ ಬೇಕಾದ ಅನುದಾನವನ್ನು ಸರ್ಕಾರದಿಂದ ಕೊಡಿಸುತ್ತೇನೆಂದು ಎಂದು ಭರವಸೆ ನೀಡಿದರು.

ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಜೀವನ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ವರ್ಷವೂ ಇಂತಹ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ಜನಾಂಗದ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಿ ಶಿಕ್ಷಣಕ್ಕೆ ಉತ್ತೇಜನ ಕೊಡುತ್ತಿದ್ದೇವಲ್ಲದೆ ಸಾಧಕರನ್ನು ಗುರುತಿಸಿ ಗೌರವಿಸುತ್ತಿದ್ದೇವೆಂದು ಹೇಳಿದರು.

ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು ಮಠದ ಪೀಠಾಧಿಪತಿ ವಿಖ್ಯಾತಾನಂದ ಸ್ವಾಮೀಜಿ, ನಾರಾಯಣ ಗುರು ಮಹಾಸಂಸ್ಥಾನ ಗರ್ತಿಕೆರೆ, ಅಮೃತ ತೀರ್ಥಹಳ್ಳಿ ತಾಲ್ಲೂಕಿನ ರೇಣುಕಾನಂದ ಸ್ವಾಮೀಜಿ ಇವರುಗಳು ಸಾನಿಧ್ಯ ವಹಿಸಿದ್ದರು.

ಕ್ಲಿಕ್ ಮಾಡಿ ಓದಿ: Kannada Novel: 7. ಊರು ತೊರೆದು ಬಂದವರು | ಹಬ್ಬಿದಾ ಮಲೆಮಧ್ಯದೊಳಗೆ

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಕರ್ನಾಟಕ ಆರ್ಯ ಈಡಿಗರ ಸಂಘದ ರಾಜ್ಯಾಧ್ಯಕ್ಷ ಡಾ.ತಿಮ್ಮೇಗೌಡ, ಜೆ.ಪಿ.ಎನ್.ಪ್ರತಿಷ್ಠಾನ ಸಂಸ್ಥಾಪಕ ಅಧ್ಯಕ್ಷ ಜೆ.ಪಿ.ಸುಧಾಕರ್, ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘದ ಅಧ್ಯಕ್ಷ ಹೆಚ್.ಶಂಕರ್, ಜಿಲ್ಲಾ ಆರ್ಯ ಈಡಿಗರ ಸಂಘದ ಮಹಿಳಾ ಅಧ್ಯಕ್ಷೆ ಅನುರಾಧ ರವಿಕುಮಾರ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಇತರರು ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version