
CHITRADURGA NEWS | 17 APRIL 2026
ಚಿತ್ರದುರ್ಗ: ರೈತರ ಕೃಷಿ ಪಂಪ್‍ಸೆಟ್‍ಗೆ ಸೋಲಾರ್ ಅಳವಡಿಕೆ ಕಾರ್ಯ ನಡೆಯುತ್ತಿದ್ದು, ಕಂಪನಿಯವರಿಂದಲೆ ಸಿವಿಲ್ ಕಾಮಗಾರಿ ಪೂರ್ಣಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಇದನ್ನೂ ಓದಿ: ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ

ಜಿಲ್ಲೆಯ ಕೃಷಿ ಪಂಪ್‍ಸೆಟ್‍ಗಳಿಗೆ ಸೋಲಾರ್ ಮೋಟಾರ್ ಹಾಗೂ ಪೆನಾಲ್ ಬೋರ್ಡ್ ಅಳವಡಿಕೆ ಕಾಮಗಾರಿಯನ್ನು ಟೆಂಡರ್ ಮೂಲಕ ಅನೇಕ ಕಂಪನಿಗಳಿಗೆ ನೀಡಲಾಗಿದೆ. ರೈತರ ವಂತಿಕೆ ಶೇ.20, ಸರ್ಕಾರದ್ದು, ಶೇ.80 ಪರ್ಸೆಂಟ್ ಹಣ ಬಳಸಬೇಕೆಂಬ ನಿಯಮವಿದೆ. ಶಕ್ತಿ, ಸಿ.ಆರ್.ಐ. ಆಸ್ಟ್ರೇಲಿಯನ್, ಮೆಗಾ, ಸ್ವಸ್ತಿಕ್ ಹಾಗೂ ಮತ್ತಿತರೆ ಕಂಪನಿಗಳು ಕಾಮಗಾರಿಯನ್ನು ನಿರ್ವಹಿಸುತ್ತಿದ್ದು, ಕೆಲ ಕಂಪನಿಯವರು ಸಿವಿಲ್ ಕಾಮಗಾರಿಯನ್ನು ರೈತರಿಂದಲೆ ಮಾಡಿಸಿಕೊಳ್ಳುತ್ತಿರುವುದು ರೈತರಿಗೆ ನಷ್ಟವುಂಟಾಗುತ್ತಿದೆ.
ಒಬ್ಬ ರೈತ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ರೂ.ಗಳನ್ನು ಖರ್ಚು ಮಾಡಿಕೊಳ್ಳುವಂತಾಗಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಬೆಸ್ಕಾಂ ಇಂಜಿನಿಯರ್‍ಗಳ ಹಾಗೂ ಕಂಪನಿಯವರ ಸಭೆ ನಡೆಸಿ ರೈತರಿಗೆ ಅನುಕೂಲವಾಗುವ ರೀತಿ ಕ್ರಮ ಕೈಗೊಂಡು ಇಲ್ಲಿಯವರೆಗೂ ರೈತರು ಕೈಯಿಂದ ಖರ್ಚು ಮಾಡಿರುವ ಹಣವನ್ನು ಹಿಂದಿರುಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಅಪರ ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ಈ ವೇಳೆ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಕೆ.ಎಂ.ಕಾಂತರಾಜು, ಮಾರುತಿ, ಜಿ.ಬಿ.ಪಾಪಣ್ಣ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
