
CHITRADURGA NEWS | 03 December 2025
ಚಿತ್ರದುರ್ಗ: ನಗರದ ವಿವಿಧ ಪ್ರದೇಶಗಳಲ್ಲಿ ಅಪಘಾತ ಸಂಭವಿಸಬಹುದಾದ ತೆರೆದ ಚರಂಡಿಗಳು, ರಾಜಕಾಲುವೆ, ಡ್ರೈನೇಜ್‍ಗಳು, ರಸ್ತೆಯಲ್ಲಿಯೇ ಬೋರ್‍ವೆಲ್ ಮುಂತಾದ ವಿವರಗಳೊಂದಿಗೆ ಫೋಟೋಗಳ ಸಹಿತ ಸಂಚಾರ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ವಿಶ್ವನಾಥ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ: ಹೆದ್ದಾರಿ ಪಕ್ಕದ ಗೂಡಂಗಡಿ ವಿದ್ಯುತ್ ಕಡಿತಗೊಳಿಸಿ | ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಅಪಘಾತ ಸಂಭವಿಸಬಹುದಾದ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಿತ್ರದುರ್ಗ ನಗರದಲ್ಲಿ ಟ್ರಾಫಿಕ್ ಸಿಗ್ನಲ್‍ಗಳ ನಿರ್ವಹಣೆ, ರಬ್ಬರ್ ಹಂಪ್ಸ್, ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸಿಕೆ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
20 ವರ್ಷಗಳ ಮೇಲ್ಪಟ್ಟ ಮೈನ್ಸ್ ಲಾರಿಗಳು ಓಡಾಟ ಈಗಾಗಲೇ ನಿರ್ಬಂಧಿಸಲಾಗಿದ್ದು, ಒಂದು ವೇಳೆ ಇಂತಹ ಲಾರಿಗಳು ಸಂಚಾರ ಮಾಡಿದರೆ ಅಂತಹ ವಾಹನಗಳನ್ನು ಸೀಜ್ ಮಾಡಬೇಕು.
ಇದನ್ನೂ ಓದಿ: ಭೋವಿ ನಿಗಮದ ವಿವಿಧ ಯೋಜನೆ | 15 ದಿನಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ | ನಿಗಮದ ಅಧ್ಯಕ್ಷ ರಾಮಪ್ಪ ಸೂಚನೆ
20 ವರ್ಷ ಮೇಲ್ಪಟ್ಟ ವಾಹನಗಳ ಓಡಾಟ ಇಲ್ಲದಿರುವ ಬಗ್ಗೆ ದೃಢೀಕರಣ ನೀಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ ಅವರು, ರಸ್ತೆ ಮಧ್ಯದಲ್ಲಿ ವಾಹನ ತಪಾಸಣೆ ನಡೆಸುವುದರಿಂದ ವಾಹನಗಳ ಹಾಗೂ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಯಾವುದೇ ಕಾರಣಕ್ಕೂ ವಾಹನಗಳನ್ನು ರಸ್ತೆ ಮಧ್ಯದಲ್ಲಿ ನಿಲ್ಲಿಸಿ ವಾಹನ ತಪಾಸಣೆ ನಡೆಸಬಾರದು ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
