CHITRADURGA NEWS | 25 SEPTEMBER 2026
ಚಿತ್ರದುರ್ಗ: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದ್ದು, ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಸ್.ರಮ್ಯ ತಿಳಿಸಿದರು.
ಇದನ್ನೂ ಓದಿ: ಭದ್ರಾ ನೀರು ಹರಿಸಿ ರೈತರ ಬದುಕು ಸುಭದ್ರ ಮಾಡಿದ್ದೇವೆ | ಸಿಎಂ ಡಿ.ಕೆ.ಶಿವಕುಮಾರ್
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ-2026ರ ಸಂಬಂಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಈ ಕ್ಷೇತ್ರದ ಚುನಾವಣಾಧಿಕಾರಿಯಾಗಿದ್ದು, ನಾಮಪತ್ರ ಸಲ್ಲಿಕೆ, ಪರಿಶೀಲನೆ ಹಾಗೂ ಸ್ವೀಕಾರ ಪ್ರಕ್ರಿಯೆಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯಲಿವೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟೆಂಬರ್ 29ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 6 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದೆ. ಅಕ್ಟೋಬರ್ 23ರಂದು ಬೆಳಿಗ್ಗೆ 8.00 ರಿಂದ ಸಂಜೆ 4.00 ರವರೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 27ರಂದು ಬೆಂಗಳೂರಿನಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಹೇಳಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರವು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ 3 ತಾಲ್ಲೂಕುಗಳನ್ನು (ಹರಿಹರ, ದಾವಣಗೆರೆ, ಜಗಳೂರು) ಒಳಗೊಂಡಿದೆ. ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಲ್ಲಿ ಚುನಾವಣೆ ಇರುತ್ತದೆ ಎಂದರು.
ಜಿಲ್ಲೆಯಲ್ಲಿ 41358 ಮತದಾರರು: ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 24,031 ಪುರುಷರು ಹಾಗೂ 17,327 ಮಹಿಳಾ ಮತದಾರರು ಸೇರಿದಂತೆ ಒಟ್ಟು 41,358 ಅರ್ಹ ಪದವೀಧರ ಮತದಾರರು ಅಂತಿಮ ಮತದಾರರ ಪಟ್ಟಿಯಲ್ಲಿದ್ದಾರೆ. ಇದರ ಅನ್ವಯ ಮೊಳಕಾಲ್ಮುರು ತಾಲ್ಲೂಕಿನಲ್ಲಿ 2226 ಪುರುಷರು, 1080 ಮಹಿಳೆಯರು ಸೇರಿದಂತೆ ಒಟ್ಟು 3306 ಪದವೀಧರ ಮತದಾರರು ಇದ್ದಾರೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 4688 ಪುರುಷರು, 3126 ಮಹಿಳೆಯರು ಸೇರಿದಂತೆ ಒಟ್ಟು 7814 ಪದವೀಧರ ಮತದಾರರು ಇದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 7144 ಪುರುಷರು, 6273 ಮಹಿಳೆಯರು ಸೇರಿದಂತೆ ಒಟ್ಟು 13417 ಪದವೀಧರ ಮತದಾರರು ಇದ್ದಾರೆ.
ಇದನ್ನೂ ಓದಿ: 1,181 ವಿದ್ಯಾರ್ಥಿಗಳ ಸಾಮೂಹಿಕ ಶ್ಲೋಕ ಪಠಣಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
ಹಿರಿಯೂರು ತಾಲ್ಲೂಕಿನಲ್ಲಿ 4185 ಪುರುಷರು, 3075 ಮಹಿಳೆಯರು ಸೇರಿದಂತೆ ಒಟ್ಟು 7260 ಪದವೀಧರ ಮತದಾರರು ಇದ್ದಾರೆ. ಹೊಸದುರ್ಗ ತಾಲ್ಲೂಕಿನಲ್ಲಿ 3196 ಪುರುಷರು, 2022 ಮಹಿಳೆಯರು ಸೇರಿದಂತೆ ಒಟ್ಟು 5218 ಮತದಾರರು ಇದ್ದಾರೆ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 2592 ಪುರುಷರು, 1751 ಮಹಿಳಾ ಮತದಾರರು ಸೇರಿದಂತೆ ಒಟ್ಟು 4343 ಪದವೀಧರ ಮತದಾರರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 41358 ಪದವೀಧರ ಮತದಾರರು ಇದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸುಸೂತ್ರ ಮತದಾನಕ್ಕಾಗಿ ಒಟ್ಟು 55 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಇದರಲ್ಲಿ 22 ಮುಖ್ಯ ಮತಗಟ್ಟೆಗಳು ಹಾಗೂ 33 ಪೂರಕ (ಅಕ್ಸಿಲರಿ) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಈಗಾಗಲೇ ಸೆಪ್ಟೆಂಬರ್ 22 ರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ರ್ಯಾಲಿ, ಸಮಾವೇಶ, ಬ್ಯಾನರ್ ಹಾಗೂ ಪ್ಲೆಕ್ಸ್ ಅಳವಡಿಕೆಗೆ ಚುನಾವಣಾಧಿಕಾರಿಗಳಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಜೆಡಿಎಸ್ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್ ಸೇರಿದಂತೆ ಮತ್ತಿತರರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

