CHITRADURGA NEWS | 20 AUGUST 2026
ಚಿತ್ರದುರ್ಗ: ಗೌರಿ ಮತ್ತು ಗಣೇಶ ಹಬ್ಬದ ಪ್ರಯುಕ್ತ ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಹತ್ತಿರದ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ (ಲಿಡ್ಕರ್) ಮಾರಾಟ ಮಳಿಗೆಯಲ್ಲಿ ಎಲ್ಲ ಚರ್ಮ ಉತ್ಪನ್ನಗಳ ಮಾರಾಟದ ಮೇಲೆ ಶೇ. 20 ರಷ್ಟು ವಿಶೇಷ ರಿಯಾಯಿತಿ ನೀಡಲಾಗಿದೆ.
ಇದನ್ನೂ ಓದಿ: ವಿವಿಧ ಪದವಿ, ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಇದೇ ಆಗಸ್ಟ್ 21 ರಿಂದ ಸೆಪ್ಟೆಂಬರ್ 13 ರವರೆಗೆ ಈ ವಿಶೇಷ ರಿಯಾಯಿತಿ ಮಾರಾಟ ಚಾಲ್ತಿಯಲ್ಲಿರಲಿದೆ. ಈ ಅವಧಿಯಲ್ಲಿ ಮಳಿಗೆಯಲ್ಲಿ ದೊರೆಯುವ ಚರ್ಮದ ಫುಟ್ವೇರ್, ವ್ಯಾನಿಟಿ ಬ್ಯಾಗ್, ಬೆಲ್ಟ್, ಪರ್ಸ್, ಚಪ್ಪಲಿ, ಶೂ ಹಾಗೂ ಸ್ಯಾಂಡಲ್ಗಳ ಖರೀದಿ ಮೇಲೆ ಗ್ರಾಹಕರು ಶೇ.20ರಷ್ಟು ರಿಯಾಯಿತಿ ಪಡೆಯಬಹುದಾಗಿದೆ.
ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕಾಗಿ ಲಿಡ್ಕರ್ ಜಿಲ್ಲಾ ಸಂಯೋಜಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9945445556 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

