Connect with us

Revision; ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ | ಆಗಸ್ಟ್ 20 ರಿಂದ ಆರಂಭ

ಮುಖ್ಯ ಸುದ್ದಿ

Revision; ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ | ಆಗಸ್ಟ್ 20 ರಿಂದ ಆರಂಭ

CHITRADURGA NEWS | 19 AUGUST 2024

ಚಿತ್ರದುರ್ಗ: ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ: 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ (Revision)ಪರಿಷ್ಕರಣೆ-2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಕ್ಲಿಕ್ ಮಾಡಿ ಓದಿ: MUDA: ಮುಡಾ ಅಕ್ರಮ | ಸಿದ್ದರಾಮಯ್ಯ ಬೆಂಬಲಕ್ಕೆ ಹಿಂದುಳಿದ ದಲಿತ ಮಠಾಧೀಶರು

ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18 ವರ್ಷ ತುಂಬುವ ಯುವ ಮತದಾರರ ಹೆಸರು ಸೇರ್ಪಡೆ ಕುರಿತು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಕ್ಕು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ವಿಶೇಷ ಅಭಿಯಾನ ದಿನಾಂಕಗಳನ್ನು ನಿಗಧಿಪಡಿಸಲಾಗಿದೆ. ಸಾರ್ವಜನಿಕರು ವಿಶೇಷ ಅಭಿಯಾನಗಳ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಹಾಗೂ ಅವಶ್ಯವಿರುವ ತಿದ್ದುಪಡಿ, ಸೇರ್ಪಡೆ ಹಾಗೂ ತೆಗೆದುಹಾಕುವಿಕೆಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಸಾರ್ವಜನಿಕರು ಅರ್ಜಿ ನಮೂನೆ 6 ಮತ್ತು8 ಗಳನ್ನು ಸಲ್ಲಿಸುವಾಗ ಸ್ವಯಂಪ್ರೇರಿತವಾಗಿ ಆಧಾರ್ ಸಂಖ್ಯೆಗಳನ್ನು ಒದಗಿಸಬಹುದಾಗಿದೆ.

ಕ್ಲಿಕ್ ಮಾಡಿ ಓದಿ: ABVP protest: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ

ಎಲ್ಲಾ ರೀತಿಯ ಚುಣಾವಣಾ ಸಂಬಂಧಿತ ಸೇವೆಗಳಿಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ನಲ್ಲಿ Voter Helpline application ಮೂಲಕ ನೇರವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

20 ಆಗಸ್ಟ್ 2024 (ಮಂಗಳವಾರ) ರಿಂದ 18 ಅಕ್ಟೋಬರ್ 2024 (ಶುಕ್ರವಾರ) ರ ವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆ ಭೇಟಿ ಮತ್ತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ/ಮರು ಹೊಂದಾಣಿಕೆ ಸೇರಿದಂತೆ ಮತದಾರರ ಪಟ್ಟಿ/ಮತದಾರರ ಗುರುತಿನ ಚೀಟಿಗಳಲ್ಲಿನ ಲೋಪದೋಷಗಳನ್ನು ತೆಗೆದುಹಾಕುವುದು.

ಅಗತ್ಯವಿರುವ ಕಡೆ ಮತದಾರರ ಪಟ್ಟಿಯಲ್ಲಿನ ಗುಣಮಟ್ಟವಿಲ್ಲದ ಭಾವಚಿತ್ರಗಳನ್ನು ಬದಲಾಯಿಸಿ ಉತ್ತಮ ಗುಣಮಟ್ಟದ ಭಾವಚಿತ್ರಗಳನ್ನು ಖಾತ್ರಿಪಡಿಸುವುದು. ವಿಭಾಗ/ಭಾಗಗಳ ಮರುಹೊಂದಾಣಿಕೆ ಹಾಗೂ ಪ್ರಸ್ತಾಪಿತ ವಿಭಾಗ/ಭಾಗಗಳ ಮತಗಟ್ಟೆಗಳ ಸ್ಥಳವನ್ನು ಅಂತಿಮಗೊಳಿಸುವಿಕೆ ಮತ್ತು ಮತಗಟ್ಟೆಗಳ ಪಟ್ಟಿಗಳಿಗೆ ಅನುಮೋದನೆ ಪಡೆದುಕೊಳ್ಳುವುದು. ನ್ಯೂನತೆಗಳ ಗುರುತಿಸುವಿಕೆ ಮತ್ತು ಅಂತಹ ನ್ಯೂನತೆಗಳನ್ನು ನಿವಾರಿಸಲು ಕಾರ್ಯತಂತ್ರ ಮತ್ತು ಕಾಲಾವಧಿಯನ್ನುಅಂತಿಮಗೊಳಿಸುವುದು ಮತ್ತು ನಿಯಂತ್ರಣ ಕೋಷ್ಟಕದ(Control Table) ನವೀಕರಣ ನಡೆಯಲಿದೆ.

19 ಅಕ್ಟೋಬರ್ 2024 (ಶನಿವಾರ) ರಿಂದ 28 ಅಕ್ಟೋಬರ್ 2024 (ಸೋಮವಾರ) ರ ವರೆಗೆ ನಮೂನೆ 1 ರಿಂದ 8 ರ ತಯಾರಿ ಹಾಗೂ ಅರ್ಹತಾ ದಿನಾಂಕ 01.01.2025 ರಂತೆ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.

ಕ್ಲಿಕ್ ಮಾಡಿ ಓದಿ: ಅನುಭವ ಮಂಟಪ ಜಗತ್ತಿಗೆ ಆದರ್ಶ | ಡಾ.ಬಸವಪ್ರಭು ಸ್ವಾಮೀಜಿ

29.10.2024 ರಂದು (ಮಂಗಳವಾರ) ಸಮಗ್ರ ಕರಡು ಮತದಾರರ ಪಟ್ಟಿಯ ಪ್ರಕಟಣೆ, ಸಾರ್ವಜನಿಕರು ತಮ್ಮ ಲೋಪದೋಷಗಳ ಕುರಿತಾಗಿ 29.10.2024 (ಮಂಗಳವಾರ) ರಿಂದ 28.11.2024 (ಗುರುವಾರ) ರ ವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಕಾಶ ಇರುತ್ತದೆ.

ಹಕ್ಕುಗಳು ಮತ್ತು ಆಕ್ಷೇಪಣೆಯ ಅವಧಿಯಲ್ಲಿ ಮುಖ್ಯ ಚುನಾವನಾಧಿಕಾರಿಗಳು ನಿಗಧಿಪಡಿಸುವ ಶನಿವಾರ ಮತ್ತು ಭಾನುವಾರಗಳಂದು ವಿಶೇಷ ಅಭಿಯಾನದ ದಿನಾಂಕಗಳನ್ನು ಶೀಘ್ರದಲ್ಲಿ ಗೊತ್ತುಪಡಿಸಲಾಗುವುದು.

ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿಯನ್ನು ದಿನಾಂಕ 24.12.2024 ರೊಳಗೆ (ಮಂಗಳವಾರ) ಮುಗಿಸಲಾಗುವುದು. 01.01.2025 ರೊಳಗೆ (ಬುಧವಾರ) ಮತದಾರರ ಪಟ್ಟಿಗಳ ಗುಣಮಟ್ಟ ಪರಿಶೀಲನೆ ಮಾಡುವುದು ಹಾಗೂ ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆಯುವುದು ಮತ್ತು ದತ್ತಾಂಶವನ್ನು ನವೀಕರಿಸುವುದು ಮತ್ತು ಪೂರಕಗಳ ಮುದ್ರಣ ಮಾಡಲಾಗುವುದು.

special 

06.01.2025 ರಂದು (ಸೋಮವಾರ) ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version