CHITRADURGA NEWS | 26 AIUGUST 2025
ಚಿತ್ರದುರ್ಗ: ಜಿಲ್ಲೆಯಲ್ಲಿ ಬರುವ ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಪಹಣಿಯಲ್ಲಿನ ಸಣ್ಣಪುಟ್ಟ ತಿದ್ದುಪಡಿಗಳನ್ನು ಮಾಡಿಕೊಡಲು ವಿಶೇಷ ಅಭಿಯಾನ ಆರಂಭಿಸಲಾಗುವುದು, ರೈತರು ಕೂಡಲೆ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಹಸಿಲ್ದಾರರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಹಿಂದೂ ಮಹಾಗಣಪ | ಈ ಬಾರಿ ಎಷ್ಟು ಅಡಿ, ಯಾವ ರೂಪ ಗೊತ್ತಾ….
ಪಹಣಿ, ಆರ್‍ಟಿಸಿ ಯಲ್ಲಿನ ಲೋಪದೋಷಗಳ ತಿದ್ದುಪಡಿ ಅಧಿಕಾರವನ್ನು ಈ ಮೊದಲು ತಹಸಿಲ್ದಾರರಿಗೆ ನೀಡಲಾಗಿತ್ತು. ಆದರೆ ಇದೀಗ, ಈ ಅಧಿಕಾರವನ್ನು ಉಪವಿಭಾಗಾಧಿಕಾರಿಗಳಿಗೆ ವಹಿಸಲಾಗಿರುತ್ತದೆ.
ಆರ್‍ಟಿಸಿ ಯಲ್ಲಿನ ಸಣ್ಣಪುಟ್ಟ ದೋಷಗಳಿಂದ ರೈತರಿಗೆ ಹಲವು ವಿಧದ ತೊಂದರೆಯಾಗುತ್ತಿದೆ, ಇದನ್ನು ಪರಿಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ರೈತ ಮುಖಂಡರುಗಳು ಜಿಲ್ಲಾಡಳಿತದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರೈತರಿಗೆ ಅನುಕೂಲವಾಗುವಂತಾಗಲು ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಅಭಿಯಾನವನ್ನು ಕೈಗೊಳ್ಳಲಾಗುವುದು.
ಪಹಣಿಯಲ್ಲಿನ ಸಣ್ಣ ಪುಟ್ಟ ದೋಷಗಳನ್ನು ತಿದ್ದುಪಡಿ ಮಾಡಲು (ಅಪೀಲು ಪ್ರಕರಣಗಳನ್ನು ಹೊರತುಪಡಿಸಿ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾ ತಹಸಿಲ್ದಾರರಿಗೆ ಸಲ್ಲಿಸಬೇಕು.
ಇದನ್ನೂ ಓದಿ: ಹೊಸದುರ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ | ಬೈಕ್ ಕಳ್ಳರ ಬಂಧನ | 11 ಬೈಕ್ ವಶಕ್ಕೆ
ತಹಸಿಲ್ದಾರರು ಇಂತಹ ಅರ್ಜಿಗಳನ್ನು ತಮ್ಮ ಹಂತದಲ್ಲಿ ಪರಿಶೀಲಿಸಿ, ಅರ್ಹ ಅರ್ಜಿಗಳ ಪಟ್ಟಿ ಮಾಡಿಕೊಂಡು, ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದಲ್ಲಿ, ಉಪವಿಭಾಗಾಧಿಕಾರಿಗಳು, ಅರ್ಹ ಅರ್ಜಿಗಳಿಗೆ ಸಂಬಂಧಿಸಿದ ಆರ್‍ಟಿಸಿ ತಿದ್ದುಪಡಿಗೆ ಅನುಮೋದನೆ ನೀಡುವರು.
ರೈತರು ಈ ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
