CHITRADURGA NEWS | 14 FEBRUARY 2026
ಚಿತ್ರದುರ್ಗ: ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ಇದೇ 15ರಂದು ಭಾನುವಾರ ಶಿವರಾತ್ರಿ ಆಚರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮವನ್ನು ಆಡಳಿತ ಮಂಡಳಿಯ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 13 ಫೆಬ್ರವರಿ | ಯಾವ ಅಡಿಕೆಗೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್ ?
ಅಂದು ಬೆಳಗ್ಗೆ ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಅವರು ಸಹಜ ಶಿವಯೋಗ ಪ್ರಾತ್ಯಕ್ಷಿಕೆ ನಡೆಸಿಕೊಡುವರು. ಈ ಸಂದರ್ಭದಲ್ಲಿ ಆಸಕ್ತರಿಗೆ ಇಷ್ಟಲಿಂಗ ದೀಕ್ಷೆ ನೆರವೇರಿಸಲಾಗುವುದು. ಇಷ್ಟಲಿಂಗವನ್ನು ಶ್ರೀಮಠದಿಂದಲೇ ನೀಡಲಾಗುವುದು.
ಆಸಕ್ತರಿಗೆ ಶಿವಯೋಗದ ಮಹತ್ವ ಹಾಗೂ ಇಷ್ಟಲಿಂಗದ ಮೂಲಕ ಲಿಂಗಾನುಸಂಧಾನ ಮಾಡಿಕೊಳ್ಳುವ ಬಗ್ಗೆ ಶ್ರೀಗಳು ತಿಳಿಸಿಕೊಡಲಿದ್ದಾರೆ.
ಸಂಜೆ 7.30 ಗಂಟೆಯಿಂದ ಶರಣರ ದೃಷ್ಟಿಯಲ್ಲಿ ಶಿವರಾತ್ರಿ ಆಚರಣೆ ಹೇಗೆ ಎಂಬ ವಿಷಯ ಕುರಿತು ಸಾಹಿತಿ ಮಲ್ಲಪ್ಪ ಫಕ್ಕೀರಪ್ಪ ಕರೆಣ್ಣನವರ ಉಪನ್ಯಾಸ ನೀಡಲಿದ್ದಾರೆ.
ಚಿಕ್ಕಜಾಜೂರಿನ ಮಾರುತಿ ಭಜನಾ ಸಂಘದವರು ವಚನ, ತತ್ವಪದ, ಜಾನಪದ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಭಜನೆ ಮಾಡಲಿದ್ದಾರೆ. ಶ್ರೀಮಠದ ಜಮುರಾ ಕಲಾವಿದರಿಂದ ವಚನ ಸಂಗೀತ ನಡೆಯಲಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಒಂದು ಸಾವಿರ ದಿನ ಪೂರ್ಣ | ಕರಾಳ ದಿನವೆಂದು ಆಚರಿಸುವುದು ಸೂಕ್ತ | ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ
ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಭಕ್ತರು ಹಾಗೂ ಅಭಿಮಾನಿಗಳು ಭಾಗವಹಿಸಬಹುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

