CHITRADURGA NEWS | 14 JULY 2026
ಚಿತ್ರದುರ್ಗ: ನಗರದ ಕೋಟೆ ಆವರಣದಲ್ಲಿರುವ ಬನಶಂಕರಿ ಅಮ್ಮನವರ ದೇವಸ್ಥಾನದಲ್ಲಿ ಆಷಾಢ ಮಾಸದ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.
ಸುಗಂಧರಾಜ, ಮಲ್ಲಿಗೆ, ಕನಕಾಂಬರ, ಸೇವಂತಿಗೆ, ಗುಲಾಬಿ, ಹಸಿರು ಪತ್ರೆ ಸೇರಿದಂತೆ ಬಗೆ ಬಗೆಯ ಹೂವಿನ ಹಾರಗಳಿಂದ ಸಿಂಗರಿಸಿ ಬೆಳಗಿನಿಂದ ಸಂಜೆಯತನಕ ಪೂಜಿಸಲಾಯಿತು.
ಇದನ್ನೂ ಓದಿ: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
ನೂರಾರು ಭಕ್ತರು ಧಾವಿಸಿ ಬನಶಂಕರಿ ಅಮ್ಮನವರಿಗೆ ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶಿವ ಪಾರ್ವತಿಯ ಗಿರಿಜಾ ಕಲ್ಯಾಣೋತ್ಸವ ಕೂಡ ನಡೆಯಿತು.
ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್.ಸತ್ಯಣ್ಣ ದೇವಸ್ಥಾನದ ಭಕ್ತ ಮಂಡಳಿಯವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

