CHITRADURGA NEWS | 03 SEPTEMBER 2026
ಚಿತ್ರದುರ್ಗ: ನಗರದ ಐತಿಹಾಸಿಕ ಚಂದ್ರವಳ್ಳಿ ಪ್ರದೇಶದಲ್ಲಿ ಚಂದ್ರವಳ್ಳಿ ವಾಯುವಿಹಾರ ಬಳಗದ ವತಿಯಿಂದ ಸೆ.6ರಂದು ಬೆಳಗ್ಗೆ 8 ಗಂಟೆಗೆ ಶ್ರೀ ಹುಲೇಗೊಂದಿ ಸಿದ್ದೇಶ್ವರ ಸ್ವಾಮಿಗೆ 25ನೇ ವರ್ಷದ ಶ್ರಾವಣ ಮಾಸದ ವಿಶೇಷ ಪೂಜೆ ಹಾಗೂ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ, ಚಂದ್ರವಳ್ಳಿ ವಾಯುವಿಹಾರಿಗಳ ಯೋಗ ಮತ್ತು ಧ್ಯಾನ ದಾಸೋಹ ಮಂದಿರದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸೆ.5ರಿಂದ ಎರಡು ದಿನ ಚಿತ್ರ ಕಲರವ ಚಿತ್ರಕಲಾ ಪ್ರದರ್ಶನ
ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ಅವರು ಯೋಗ ಮತ್ತು ಧ್ಯಾನ ದಾಸೋಹ ಮಂದಿರವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಹುಲೇಗೊಂದಿ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಲಿದೆ. ಶ್ರಾವಣ ಮಾಸದ ಅಂಗವಾಗಿ ದಾಸೋಹ ಜಾತ್ರೆಯನ್ನೂ ಆಯೋಜಿಸಲಾಗಿದೆ.
ಇದನ್ನೂ ಓದಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 23 ಕೋಟಿ ರೂ. ಅನುದಾನ | ಯಾವ ರಸ್ತೆ ಇಲ್ಲಿದೆ ಡೀಟೇಲ್ಸ್
ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಶ್ರೀ ಹುಲೇಗೊಂದಿ ಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆದು, ದಾಸೋಹ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಚಂದ್ರವಳ್ಳಿ ವಾಯುವಿಹಾರ ಬಳಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

