
CHITRADURGA NEWS | 25 SEPTEMBER 2025
ಚಿತ್ರದುರ್ಗ: ದಸರಾ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಬೆಂಗಳೂರಿನ ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಹೊಸಪೇಟೆ ನಡುವೆ ತಲಾ ಎರಡು ಟ್ರಿಪ್ಗಳಿಗೆ ವಿಶೇಷ ಎಕ್ಸ್ ಪ್ರೆಸ್ ರೈಲು ಬಿಡಲಿದೆ.
ಇದನ್ನೂ ಓದಿ: ST ಪಟ್ಟಿಗೆ ಅನ್ಯ ಜಾತಿ ಸೇರ್ಪಡೆ ವಿರೋಧಿಸಿ ಜಿಲ್ಲಾ ನಾಯಕ ಸಮಾಜದಿಂದ ಪ್ರತಿಭಟನೆ
ರೈಲು ಸಂಖ್ಯೆ 06215 ಎಸ್ಎಂವಿಟಿ ಬೆಂಗಳೂರು–ಹೊಸಪೇಟೆ ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 26, 28 ರಂದು ಸಂಜೆ 7ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 4:15ಕ್ಕೆ ಹೊಸಪೇಟೆ ತಲುಪಲಿದೆ.
ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06216 ಹೊಸಪೇಟೆ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಸೆಪ್ಟೆಂಬರ್ 27, 29 ರಂದು ರಾತ್ರಿ 8:45 ಕ್ಕೆ ಹೊಸಪೇಟೆಯಿಂದ ಹೊರಟು ಮರುದಿನ ಬೆಳಿಗ್ಗೆ 08:10 ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ರೈಲು ಎರಡೂ ಮಾರ್ಗಗಳಲ್ಲಿ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್ ಮತ್ತು ತೋರಣಗಲ್ಲು ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ.
ಇದನ್ನೂ ಓದಿ: ಹೊಸದುರ್ಗ ತಾಲೂಕಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಈ ರೈಲು ಒಟ್ಟು 19 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, ಹತ್ತು ಸ್ಲೀಪರ್ ಕ್ಲಾಸ್, ಮೂರು ಸಾಮಾನ್ಯ, ಎರಡನೇ ದರ್ಜೆ ಹಾಗೂ ಎರಡು ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ ಎಂದು ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ್ ಕನಮಡಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
