CHITRADURGA NEWS | 29 JUNE 2026
ಚಿತ್ರದುರ್ಗ: ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್ ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ 1 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡರ ದೂರದೃಷ್ಟಿ ಆಡಳಿತ ದಾರಿದೀಪ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
ಜುಲೈ 01 ರಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ, ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು.
ನಂತರ ಡಾ.ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿಜಿಗಳೊಂದಿಗೆ ಸೌಹಾರ್ದ ಚರ್ಚೆ ನಡೆಸಲಿದ್ದಾರೆ.
ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯುವ ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನ ಎಂಬ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ವೇದಿಕೆಯಲ್ಲಿ ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಉಪಸ್ಥಿತರಿರುವರು. ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿದ್ಯ ವಹಿಸುವರು.
ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ.
ಇದನ್ನೂ ಓದಿ: ಉಪರಾಷ್ಟ್ರಪತಿಗಳಿಂದ ಮಾದಾರ ಚನ್ನಯ್ಯ ಶ್ರೀಗಳಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ
ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠ ಟ್ರಸ್ಟ್ ನಾ ರವಿಮಲ್ಲಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
