CHITRADURGA NEWS | 16 SEPTEMBER 2026
ಚಿತ್ರದುರ್ಗ: ಜಿಲ್ಲಾಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಇದೇ ಸೆಪ್ಟೆಂಬರ್ 17ರಂದು ಬೆಳಿಗ್ಗೆ 10ಕ್ಕೆ ನಗರದ ಬಿ.ಡಿ.ರಸ್ತೆಯ ಹಳೇ ಮಾಧ್ಯಮಿಕ ಆವರಣದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗಾಗಿ ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆ ಏರ್ಪಡಿಸಲಾಗಿದೆ.
ಇದನ್ನೂ ಓದಿ: ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಕ್ಕೆ ರಾಘವೇಂದ್ರ ಕುಷ್ಟಗಿ ಆಯ್ಕೆ
ಆಸಕ್ತ ಹಿರಿಯ ನಾಗರಿಕರು ಸೆಪ್ಟೆಂಬರ್ 17ರಂದು ಬೆಳಿಗ್ಗೆ 9.30 ಗಂಟೆಗೆ ಹೆಸರು ನೋಂದಾಯಿಸಿ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಕೋರಿದೆ.
ಕ್ರೀಡಾ ಸ್ಪರ್ಧೆಗಳಾದ ಮ್ಯೂಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‍ನಲ್ಲಿ ಬಾಲ್ ಎಸೆಯುವುದು ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಾದ ಗಾಯನ ಸ್ಪರ್ಧೆ, ಏಕ ಪಾತ್ರಾಭಿನಯ ಸ್ಪರ್ಧೆಗಳು ಮಹಿಳೆಯು ಹಾಗೂ ಪುರುಷರಿಗೆ ಪ್ರತ್ಯೇಕವಾಗಿ ನಡೆಯಲಿವೆ.
ಇದನ್ನೂ ಓದಿ: ಸಿಟಿ ಸ್ಕ್ಯಾನ್ ಸೇವೆ ಸ್ಥಗಿತಕ್ಕೆ ಅಧಿಕಾರಿಗಳ ವಿರುದ್ಧ ಸಚಿವರ ಗರಂ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

