ಹೊಳಲ್ಕೆರೆ
sports; ಪದವಿಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ
CHITRADURGA NEWS | 31 AUGUST 2024
ಹೊಳಲ್ಕೆರೆ: ಪಟ್ಟಣದ ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಶನಿವಾರ ನಡೆದ 2024-25 ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ(sports)ವನ್ನು ಶಾಸಕ ಎಂ.ಚಂದ್ರಪ್ಪ ಉದ್ಘಾಟಿಸಿದರು.
ಕ್ಲಿಕ್ ಮಾಡಿ ಓದಿ: Kannada Story: ಬಿ.ಎಲ್.ವೇಣು ರಚಿಸಿರುವ ‘ಸುಡುಗಾಡು ಸಿದ್ಧನ ಪ್ರಸಂಗ ‘| ದಾವಣಗೆರೆ ವಿವಿ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪಠ್ಯ
ಉದ್ಘಾಟಿಸಿ ಮಾತನಾಡಿದ ಶಾಸಕರು, ಪಾಠಗಳ ಜೊತೆ ಮಕ್ಕಳು ಕ್ರೀಡೆಯತ್ತ ಮನೋಬಲ ಹೆಚ್ಚಿಸಿಕೊಳ್ಳಬೇಕು. ಮಕ್ಕಳಲ್ಲಿ ಕ್ರೀಡಾ ಅಸಕ್ತಿ ಬೆಳೆಸದಿದ್ದರೆ ಆರೋಗ್ಯ ಮತ್ತು ಶಿಕ್ಷಣಕ್ಕೂ ತೊಂದರೆಯಾಗುತ್ತದೆನ್ನುವುದು ಪಾಶ್ವಿಮಾತ್ಯ ರಾಷ್ಟ್ರಗಳಿಂದ ಗೊತ್ತಾಗಿದೆ.
ಸರ್ಕಾರಕ್ಕಿಂತ ಹೆಚ್ಚಾಗಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಕ್ರೀಡೆಗೆ ಹೆಚ್ಚಿನ ಒತ್ತು ಕೊಡುತ್ತಿದ್ದಾರೆ. ಮಕ್ಕಳ ಆಟಕ್ಕೆ ತೊಂದರೆಯಾಗಬಾರದೆಂದು ಐದು ಲಕ್ಷ ರೂ.ಗಳ ಕ್ರೀಡಾ ಸಾಮಾಗ್ರಿ ಕೊಟ್ಟಿದ್ದೇನೆ. ಪಟ್ಟಣದಲ್ಲಿ 12 ಕೋಟಿ ರೂ.ವೆಚ್ಚದಲ್ಲಿ ಸ್ಟೇಡಿಯಂ ನಿರ್ಮಾಣವಾಗಿದೆ. ಒಳಾಂಗಣ ಕ್ರೀಡಾಂಗಣಕ್ಕೆ ಈಜುಕೊಳ ನಿರ್ಮಿಸಲಾಗಿದೆ.
ತಾಲ್ಲೂಕು ಮಟ್ಟದ ಕ್ರೀಡೆಯಲ್ಲಿ ಗೆದ್ದವರು ಜಿಲ್ಲಾ ಮಟ್ಟ, ಜಿಲ್ಲಾ ಮಟ್ಟದಲ್ಲಿ ಗೆದ್ದವರು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲುವಂತೆ ಶಿಕ್ಷಕರುಗಳು ಮಕ್ಕಳನ್ನು ತಯಾರು ಮಾಡಬೇಕು.
ಕ್ಲಿಕ್ ಮಾಡಿ ಓದಿ: Novel: ನಾಳೆಯಿಂದ ನಿಮ್ಮ ಮುಂದೆ | ಹಬ್ಬಿದಾ ಮಲೆ ಮಧ್ಯದೊಳಗೆ | ಬಯಲು ಸೀಮೆಯ ಮಹಾಕಾದಂಬರಿ
ಸರ್ಕಾರದಿಂದ ಏನು ಸೌಲಭ್ಯ ಬೇಕೋ ಅದನ್ನು ದೊರಕಿಸುತ್ತೇನೆ. ಐ.ಎ.ಎಸ್. ಐ.ಪಿ.ಎಸ್. ಪರೀಕ್ಷೆಯಲ್ಲಿ ಶೇ.60 ರಷ್ಟು ಹೆಣ್ಣು ಮಕ್ಕಳು ತೇರ್ಗಡೆಯಾಗಿರುವುದು ಸಂತೋಷದ ಸಂಗತಿ. ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ತಿಳಿಸಿದರು.
ತಾಲ್ಲೂಕಿನಾದ್ಯಂತ ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆನ್ನುವ ದೃಷ್ಟಿಯಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಚಾಲಕ, ಕಂಡಕ್ಟರ್ ಗಳಿಗೆ ಕೈಯಿಂದ ಸಂಬಳ ನೀಡುತ್ತಿದ್ದೇನೆ. ರಾಜ್ಯದಲ್ಲಿ ಎಲ್ಲಿಯೂ ಇಂತಹ ಸೌಕರ್ಯ ಸರ್ಕಾರಿ ಶಾಲೆ ಮಕ್ಕಳಿಗಿಲ್ಲ ಎಂದು ಹೇಳಿದರು.
ಈ ವೇಳೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಪುಟ್ಟಸ್ವಾಮಿ, ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜಿನ ಸ್ಥಳೀಯ ಸಲಹಾ ಸಮಿತಿ ಅಧ್ಯಕ್ಷ ಎಸ್.ಆರ್.ಗಿರೀಶ್, ಉಪಾಧ್ಯಕ್ಷ ಮಾರುತೇಶ್ ಎಸ್. ಪ್ರಾಚಾರ್ಯರಾದ ಶಿವಗಂಗಮ್ಮ ಪಿ. ಪುರಸಭೆ ಸದಸ್ಯರುಗಳಾದ ಪಿ.ಆರ್.ಮಲ್ಲಿಕಾರ್ಜುನ್, ಸುಧಾ ಬಸವರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್, ಸ್ಥಳೀಯ ಸಲಹಾ ಸಮಿತಿ ಸದಸ್ಯರುಗಳು, ತಾಲ್ಲೂಕು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರುಗಳು ಕ್ರೀಡಾಕೂಟದಲ್ಲಿ ಇದ್ದರು.