
CHITRADURGA NEWS | 01 JULY 2025
ಚಿತ್ರದುರ್ಗ: ನಮ್ಮೂರ ಶಾಲೆಗೆ ನಮ್ಮ ಯುವಜನರು ಕಾರ್ಯಕ್ರಮದಡಿ 2024-25ನೇ ಸಾಲಿಗೆ ರೂ.1 ಲಕ್ಷ ಕ್ರೀಡಾ ಪ್ರೋತ್ಸಾಹಧನ ಪ್ರಸ್ತಾವನೆ ಸಲ್ಲಿಸಲು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಪ್ರೋತ್ಸಾಹ ಧನ ನೀಡಲಾಗುವುದು.
ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ರೂ.10,000/- ಶಾಲೆಯ ಎಸ್.ಡಿ.ಎಂ.ಸಿಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಗೆ ರೂ.90,000/- ನೀಡಲಾಗುವುದು.
1 ಏಪ್ರಿಲ್ 2024 ರಿಂದ 31 ಮಾರ್ಚ್ 2025 ವರೆಗೆ ನಡೆದ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ಶಾಲೆಗಳು ಉಪನಿರ್ದೇಶಕರ ಮೇಲು ಸಹಿಯೊಂದಿಗೆ ಜುಲೈ 05 ರೊಳಗೆ ಇಲಾಖೆ ಪ್ರಸ್ತಾವನೆ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
