ಮುಖ್ಯ ಸುದ್ದಿ
SPORTS; ಕ್ರೀಡಾ ವಿದ್ಯಾರ್ಥಿ ವೇತನ | ಅರ್ಜಿ ಅಹ್ವಾನ
CHITRADURGA NEWS | 15 JULY 2024
ಚಿತ್ರದುರ್ಗ: 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಇಲಾಖೆಯ ಅಧಿಕೃತ ಜಾಲತಾಣ https://sevasindhuservices.
ಷರತ್ತುಗಳು : ಅರ್ಜಿದಾರರು 2023-24 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ (6 ರಿಂದ 10ನೇ ತರಗತಿಯಲ್ಲಿ) ಓದುತ್ತಿರಬೇಕು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 2023 ರ ಏಪ್ರಿಲ್ 1 ರಿಂದ 2024 ಮಾರ್ಚ್ 31 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2023 ಏಪ್ರಿಲ್ ರಿಂದ 2024 ಮಾರ್ಚ್ 31 ರ ಅವಧಿಯಲ್ಲಿ ನಡೆದ ಕ್ರೀಡಾ ಕೂಟಗಳಲ್ಲಿನ ಸಾಧನೆಯನ್ನು ಮಾತ್ರ ಪರಿಗಣಿಸಲಾಗುವುದು.
ಇದನ್ನೂ ಓದಿ: Ravi Hegde; ಇದು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ | ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಂತಹ ಕ್ರೀಡಾಟುಗಳು ಹಾಗೂ ರಾಷ್ಟ್ರೀಯ ಶಾಲಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ಕ್ರೀಡಾ ವೇತನ ಮೊತ್ತಕ್ಕೆ ಅರ್ಹರಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/- ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.