Connect with us

    ರೈತರಿಗೆ ಖುಷಿ ಸುದ್ದಿ | ಇನ್ನು ಮುಂದೆ 2 ಹೆಕ್ಟೇರ್ ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ

    ಮುಖ್ಯ ಸುದ್ದಿ

    ರೈತರಿಗೆ ಖುಷಿ ಸುದ್ದಿ | ಇನ್ನು ಮುಂದೆ 2 ಹೆಕ್ಟೇರ್ ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 31 JANUARY 2024

    ಚಿತ್ರದುರ್ಗ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಅಟಲ್ ಭೂಜಲ್ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ 2023-24ನೇ ಸಾಲಿಗೆ ಅರ್ಹ ರೈತ ಫಲಾನುಭವಿಗಳಿಗೆ ಈವರೆಗೆ 1 ಹೆಕ್ಟೇರ್‍ವರೆಗೆ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯವನ್ನು ನೀಡಲಾಗುತ್ತಿತ್ತ. ಈಗ ಯೋಜನೆಯ ಮಾರ್ಗಸೂಚಿ ಅನ್ವಯ 2 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ವಿಸ್ತರಣೆ ಮಾಡಲಾಗಿದೆ.

    ಇದನ್ನೂ ಓದಿ: ಡಿಸಿ ಕಚೇರಿಯಲ್ಲಿ ಅಹವಾಲು ಸ್ವೀಕಾರಕ್ಕೆ ಶಾಶ್ವತ ಕೌಂಟರ್

    ಈಗಾಗಲೇ 1 ಹೆಕ್ಟೇರ್‍ವರೆಗೆ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯ ಪಡೆದ ಅರ್ಹ ರೈತ ಫಲಾನುಭವಿಗಳು ಹೆಚ್ಚುವರಿಯಾಗಿ ಇನ್ನೂ 1 ಹೆಕ್ಟೇರ್‍ವರೆಗೂ ಸ್ಪ್ರಿಂಕ್ಲರ್ ಸೆಟ್ ಸೌಲಭ್ಯವನ್ನು ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಅರ್ಹ ರೈತ ಫಲಾನುಭವಿಗಳು ಈ ಅವಕಾಶ ಉಪಯೋಗಿಸಿಕೊಳ್ಳಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top