
CHITRADURGA NEWS | 16 NOVEMBER 2024
ಚಿತ್ರದುರ್ಗ: ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ(Sri Ayyappa Swamy) ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮಕ್ಕೆ ಇಂದು ಶ್ರೀ ಗಣ ಹೋಮ ಶ್ರೀ ಚಂಡಿಕಾ ಹೋಮ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಕ್ಲಿಕ್ ಮಾಡಿ ಓದಿ: ಜಿಲ್ಲಾ ಮಟ್ಟದ ಯುವಜನೋತ್ಸವ | ಪೂರ್ವಭಾವಿ ಸಭೆ
60 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾಲೆ ಧರಿಸಿದ ಸ್ವಾಮಿಗಳಿಗೆ ಪ್ರತಿನಿತ್ಯ ಉಚಿತ ಅನ್ನದಾನ ಕಾರ್ಯಕ್ರಮ ಉದ್ಘಾಟನೆಯನ್ನು ಎಸ್ ಆರ್ ಎಸ್ ವಿದ್ಯಾಸಂಸ್ಥೆ ಸುಜಾತಾ ಲಿಂಗರೆಡ್ಡಿ, ಗ್ರಾಮ ಪಂಚಾಯತ್ ವಿನಯ್ ಕುಮಾರ್ ನೆರವೇರಿಸಿದರು.
ಡಿ.18 ರಂದು ಸಂಜೆ 7 ಗಂಟೆಗೆ 18 ಮೆಟ್ಟಿಲುಗಳ ಪಡಿಪೂಜ ಕಾರ್ಯಕ್ರಮ, ಡಿ.22 ರಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಾ ಅನ್ನದಾನ ಕಾರ್ಯಕ್ರಮ, ಜನವರಿ 1 ರಂದು ಸಂಜೆ 6 ಗಂಟೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ, ಜನವರಿ 14 ರಂದು ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಈ ಎಲ್ಲಾ ಕಾರ್ಯಕ್ರಮಕ್ಕೆ ಭಕ್ತಾದಿಗಳು ಭಾಗವಹಿಸಬಹುದು.
ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಕಾರ್ಯದರ್ಶಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ, ಪದಾಧಿಕಾರಿಗಳಾದ ಸೂರಪ್ಪ, ರೇಷ್ಮೆ, ಮಂಜುನಾಥ್, ಚಂದ್ರಶೇಖರ್, ಇಂದ್ರನ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

