ಮುಖ್ಯ ಸುದ್ದಿ
ಮೇದೆಹಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ಬ್ರಹ್ಮೋತ್ಸವ | ವಿಶೇಷ ಅನ್ನ ಸಂತರ್ಪಣೆ

CHITRADURGA NEWS | 23 DECEMBER 2024
ಚಿತ್ರದುರ್ಗ: ನಗರದ ಮೇದೆಹಳ್ಳಿಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ 25 ನೇ ವರ್ಷದ ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅನ್ನ ಸಂತರ್ಪಣೆ ಆಯೋಜಿಸಲಾಗಿತ್ತು.
ಕ್ಲಿಕ್ ಮಾಡಿ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ ರೇಟ್

ವಿಶೇಷ ಮಹಾ ಅನ್ನದಾನದ ಕಾರ್ಯಕ್ರಮ ಉದ್ಘಾಟನೆಯನ್ನು ಮೆದೇಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಕೆ.ಎನ್.ಕಾವ್ಯ ವಿಜಯಕುಮಾರ್, ವರ್ತಕ ಉದಯಶೆಟ್ಟಿ, ಸತೀಶ್, ವೈದ್ಯ ಹನುಮಂತರೆಡ್ಡಿ, ಮಾಜಿ ಅಧ್ಯಕ್ಷ ಉಜ್ಜಿನಿ ಸ್ವಾಮಿ ನೇರವೇರಿಸಿದರು.
ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಚಿತ್ರದುರ್ಗದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಪ್ರಸಾದವನ್ನು ಸ್ವೀಕರಿಸಿದರು.
ಜನವರಿ 13 ರಂದು ಸಂಜೆ 6 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಶ್ರೀ ಸನ್ನಿಧಾನದವರೆಗೆ ಶ್ರೀ ಅಯ್ಯಪ್ಪ ಸ್ವಾಮಿಯ ದೇವರ ಆಭರಣ ಮೆರವಣಿಗೆ ಜರುಗಲಿದೆ.
ಕ್ಲಿಕ್ ಮಾಡಿ ಓದಿ: ಕಿಚ್ಚನ ಜೊತೆ ಕಾರಲ್ಲಿ ಕುಳಿತ ಡಾಲಿಗೆ ಅಚ್ಚರಿ
ಜನವರಿ 14 ರಂದು ಮಕರ ಸಂಕ್ರಮಣದ ಅಂಗವಾಗಿ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ವಿಶೇಷವಾದ ಲಕ್ಷ ದೀಪೋತ್ಸವ ಕಾರ್ಯಕ್ರಮ ಇರಲಿದೆ.
ದೇವಸ್ಥಾನದ ಕಾರ್ಯದರ್ಶ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ ಹಾಗೂ ದೇವಸ್ಥಾನದ ನಿರ್ದೇಶಕರು ಉಪಸ್ಥಿತರಿದ್ದರು.
